ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JUNE 2024
DAM LEVEL : ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಬಿರುಸು ಪಡೆಯುತ್ತಿದೆ. ಹಾಗಾಗಿ ಜಲಾಶಯಗಳಿಗೆ ಒಳ ಹರಿವು ಪ್ರಮಾಣ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಮೂರು ಜಲಾಶಯಗಳ ಪೈಕಿ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಇತ್ತ ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಂಗಳಿಗೆ ಒಳ ಹರಿವು ಪ್ರಮಾಣ ತುಸು ಏರಿಕೆಯಾಗಿದೆ.
ಸಾವಿರ ಕ್ಯೂಸೆಕ್ ಒಳ ಹರಿವು
ಭದ್ರಾ ಜಲಾಶಯಕ್ಕೆ ಈತನಕ ಸಣ್ಣ ಪ್ರಮಾಣದ ಒಳ ಹರಿವು ಇತ್ತು. ಹಿನ್ನೀರು ಭಾಗದಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿರುವ ಹಿನ್ನೆಲೆ ಒಳ ಹರಿವು ಸಾವಿರ ಕ್ಯೂಸೆಕ್ ಗಡಿ ದಾಟಿದೆ. ಇವತ್ತು ಭದ್ರಾ ಡ್ಯಾಂಗೆ 1419 ಕ್ಯೂಸೆಕ್ ಇದೆ. ಜಲಾಶಯದ ನೀರಿನ ಮಟ್ಟ 119.7 ಅಡಿಗೆ ತಲುಪಿದೆ.
ಲಿಂಗನಮಕ್ಕಿ ಒಳ ಹರಿವೂ ಏರಿಕೆ
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕೂಡ ಏರಿಕೆಯಾಗುತ್ತಿದೆ. ಇವತ್ತು ಜಲಾಶಯಕ್ಕೆ 3862 ಕ್ಯೂಸೆಕ್ ಒಳ ಹರಿವು ಇದೆ. ಸದ್ಯ ಜಲಾಶಯದ ನೀರಿನ ಮಟ್ಟ 1744.85 ಅಡಿಗೆ ತಲುಪಿದೆ. ಕಳೆದ 24 ಗಂಟೆಗೆಯಲ್ಲಿ ನೀರಿನ ಮಟ್ಟ 0.25 ಅಡಿಯಷ್ಟು ಹೆಚ್ಚಳವಾಗಿದೆ.
ಇದನ್ನೂ ಓದಿ – ಗಾಳಿ, ಮಳೆ, ಮರ ಉರುಳಿ ಮನೆ ಸಂಪೂರ್ಣ ಜಖಂ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















