BREAKING NEWS – ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ಡಿಕ್ಕಿ, ಶಿವಮೊಗ್ಗ ಮೂಲದ 13 ಮಂದಿ ಸಾವು

SHIVAMOGGA LIVE NEWS | 28 JUNE 2024 (ಈ ಸುದ್ದಿಯನ್ನು ಇನ್ನು 44 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

HAVERI : ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿ (MISHAP) ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್‌ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.

ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ  ದೇವಿ ದರ್ಶನ ಪಡೆದು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬ್ಯಾಡಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಮೃತರೆಲ್ಲ ಶಿವಮೊಗ್ಗ ಮೂಲದವರು

ಟಿಟಿ ವಾಹನದಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಎಲ್ಲರು ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಎಮ್ಮೆಹಟ್ಟಿ ಗ್ರಾಮದವರು ಎನ್ನಲಾಗುತ್ತಿದೆ. ಎಲ್ಲರ ಗುರುತು ಇನ್ನಷ್ಟೆ ಗೊತ್ತಾಗಬೇಕಿದೆ.

ಇದನ್ನೂ ಓದಿ – ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಸೂಚಿಸಿ ಡಿಸಿ ಆದೇಶ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

haveri-mishap.

Leave a Comment