ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JUNE 2024
BHADRAVATHI : ಹಾವೇರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರಾದ 9 ಮಂದಿಯ ಅಂತ್ಯ ಸಂಸ್ಕಾರವು (Last Rites) ಭದ್ರಾವತಿ ತಾಲೂಕು ಎಮ್ಮಹೆಟ್ಟಿ ಗ್ರಾಮದಲ್ಲಿ ನಡೆಯಿತು. ಮರಾಠ ಸಂಪ್ರದಾಯದಂತೆ ಶುಕ್ರವಾರ ಸಂಜೆ ಹಿಂದೂ ರುದ್ರಭೂಮಿಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಇದಕ್ಕೂ ಮೊದಲು ಎಮ್ಮೆಹಟ್ಟಿಯ ಸರ್ಕಾರಿ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸುತ್ತಮುತ್ತಲ ಗ್ರಾಮ ಸೇರಿದಂತೆ ವಿವಿಧೆಡೆಯಿಂದ ಸಂಬಂಧಿಕರು, ಪರಿಚಿತರು ಸೇರಿದಂತೆ ದೊಡ್ಡ ಸಂಖ್ಯೆಯ ಜನರು ಸೇರಿದ್ದರು. ಜನರ ನಿಯಂತ್ರಣಕ್ಕೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಶಾಸಕಿ ಶಾರದಾ ಪೂರ್ಯಾ ನಾಯ್ಕ, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಬಿ. ಅಶೋಕನಾಯ್ಕ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಅಂತಿಮ ದರ್ಶನ ಪಡೆದರು.
ಒಂದೇ ಚಿತೆಯಲ್ಲಿ ಅಂತ್ಯ ಸಂಸ್ಕಾರ
ಗ್ರಾಮದ ರುದ್ರಭೂಮಿಯಲ್ಲಿ ಮರಾಠ ಸಂಪ್ರದಾಯದಂತೆ 9 ಜನರನ್ನು ಒಂದೇ ಚಿತೆಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ವಿಶಾಲಾಕ್ಷಮ್ಮ, ಆದರ್ಶ, ಭಾಗ್ಯಮ್ಮ, ಮಾನಸಾಳ ಮೃತ ದೇಹಗಳಿಗೆ ಸಹೋದರನ ಮಗ ಅಗ್ನಿ ಸ್ಪರ್ಶ ಮಾಡಿದರು.
ಇದನ್ನೂ ಓದಿ – ತರಲಘಟ್ಟ ಬಳಿ ಭೀಕರ ಅಪಘಾತ, ಬೈಕ್‌ಗೆ ಆಂಬುಲೆನ್ಸ್ ಡಿಕ್ಕಿ, ಮೂವರು ಸಾವು
LATEST NEWS
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು















