ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JUNE 2024
BHADRAVATHI : ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಜೂ.30ರಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ (Visit) ನೀಡುತ್ತಿದ್ದಾರೆ. ಇದು ವಿಐಎಸ್ಎಲ್ ಕಾರ್ಮಿಕರಲ್ಲಿ ನಿರೀಕ್ಷೆ ಮೂಡಿಸಿದೆ.
ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಬೆಳಗ್ಗೆ 11.45ಕ್ಕೆ ಭದ್ರಾವತಿಯ ವಿಐಎಸ್ಎಲ್ಗೆ ತಲುಪಲಿದ್ದಾರೆ. ಕಾರ್ಖಾನೆಯ ಉತ್ಪಾದನಾ ಘಟಕಕ್ಕೆ ಭೇಟಿ, ಕಾರ್ಮಿಕರ ಭೇಟಿ, ವಿಐಎಸ್ಎಲ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 3.15ಕ್ಕೆ ವಿಐಎಸ್ಎಲ್ನಿಂದ ರಸ್ತೆಯ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಸಂಜೆ 4.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೊರಟು ರಾತ್ರಿ 7ಕ್ಕೆ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿ ತಲುಪಲಿದ್ದಾರೆ.
ಇದನ್ನೂ ಓದಿ – ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸ್ ಠಾಣೆ ಮುಂದೆ 25 ಆಟೋ ಚಾಲಕರಿಂದ ಆಣೆ, ಪ್ರಮಾಣ, ಕಾರಣವೇನು?
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?