ಭದ್ರಾವತಿ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, ಮಹತ್ವದ ಮೀಟಿಂಗ್, ಏನೆಲ್ಲ ಪರಿಶೀಲಿಸಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 JUNE 2024

BHADRAVATHI : ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ ನೀಡಿದ್ದರು. ವಿವಿಧ ಘಟಕಗಳಿಗೆ ತೆರಳಿ ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕಾರ್ಖಾನೆಗೆ ಭೇಟಿ, ಪರಿಶೀಲನೆ

ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಲಾರ್ಪಣೆ ಮಾಡಿದರು. ಬಳಿಕ ಕಾರ್ಖಾನೆಯ ಪ್ರೈಮರಿ ಮಿಲ್, ಸ್ಟೀಲ್ ಮೇಕಿಂಗ್ ವಿಭಾಗ, ಫೋರ್ಜ್ ವಿಭಾಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದರು. ಇದೇ ವೇಳೆ ಕಾರ್ಮಿಕರಿಂದಲು ಮಾಹಿತಿ ಪಡೆದರು.

300624-HD-Kumaraswamy-visit-to-VISL-Bhadravathi.webp

ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿಯ ಬಳಿಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಐಎಸ್‌ಎಲ್ ಆಡಳಿತ ಮಂಡಳಿ ಜೊತೆಗೆ ಸಭೆ ನಡೆಸಿದರು. ಕಾರ್ಖಾನೆ ಪುನಶ್ಚೇತನ ಸಂಬಂಧ ಮಹತ್ವ ಚರ್ಚೆ ನಡೆಯಿತು.

ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಶಾರದಾ ಪೂರ್ಯಾನಾಯ್ಕ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2024

Leave a Comment