ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JULY 2024
SAGARA : ಮರದ ಕೊಂಬೆ ಮೈಮೇಲೆ ಬಿದ್ದು ರೈತರೊಬ್ಬರು (FARMER) ಮೃತಪಟ್ಟಿದ್ದಾರೆ. ಕೊಂಬೆ ಕತ್ತರಿಸುತ್ತಿರುವಾಗ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರೈತ ಅಶೋಕ್ (58) ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆತರುವಾಗ ಮೃತಪಟ್ಟಿದ್ದಾರೆ.
ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಮನೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಮನೆ ಹಿಂಭಾಗ ಬೃಹದಾಕಾರವಾಗಿ ಬೆಳೆದಿದ್ದ ಮರವನ್ನು ಕೆಲಸಗಾರರು ಕತ್ತರಿಸುತ್ತಿದ್ದಾಗ ನಿಯಂತ್ರಣಕ್ಕೆ ಕಟ್ಟಿದ್ದ ಹಗ್ಗ ತುಂಡಾಗಿ ಅಶೋಕ ಅವರ ತಲೆಯ ಮೇಲೆ ಕೊಂಬೆ ಬಿದ್ದಿದೆ. ಅಶೋಕ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮಂಗಳವಾರ ಸ್ವಗ್ರಾಮ ಹಿರೇಮನೆಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಸಾಧ್ಯತೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





