ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JULY 2024
SHIMOGA : ಸಿಸಿಟಿವಿ ಕ್ಯಾಮರಾಗಳ ಕಣ್ತಪ್ಪಿಸುವ ಉದ್ದೇಶಕ್ಕೆ ನಂಬರ್ ಪ್ಲೇಟ್ (Number Plate) ಇಲ್ಲದೆ ಬೈಕ್ ಚಲಾಯಿಸುತ್ತಿದ್ದವನಿಗೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಬೈಕ್ ಮಾಲೀಕನಿಗೆ 12 ಸಾವಿರ ರೂ. ದಂಡ ವಿಧಿಸಲಾಗಿದೆ.
ಶಿವಮೊಗ್ಗದಲ್ಲಿ ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ಸಿಬ್ಬಂದಿ ಪ್ರವೀಣ್ ಪಾಟೀಲ್, ಸುರೇಶ್, ಪ್ರಶಾಂತ್, ಪ್ರಕಾಶ್ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ನಂಬರ್ ಪ್ಲೇಟ್ ಇಲ್ಲದ ಬೈಕ್ ತಡೆದು ತಪಾಸಣೆ ಮಾಡಿದ್ದರು. ಈ ವೇಳೆ ಬೈಕ್ ಅನ್ನು ಮಾರ್ಪಾಡು ಮಾಡಿರುವುದು ಬೆಳಕಿಗೆ ಬಂದಿತ್ತು. ಸವಾರ ಹೆಲ್ಮೆಟ್ ಕೂಡ ಧರಿಸಿರಲಿಲ್ಲ.

ಈ ಸಂಬಂಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಪಿಎಸ್‌ಐ ತಿರುಮಲೇಶ್ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಮಂಗಳವಾರ ಬೈಕ್ ಮಾಲೀಕನಿಗೆ 12 ಸಾವಿರ ರೂ. ದಂಡ ವಿಧಿಸಿದೆ. ಸಿಸಿಟಿವಿ ಕಣ್ತಪ್ಪಿಸುವ ಉದ್ದೇಶದಿಂದ ಹಲವರು ಬೈಕ್‌ಗಳ ನಂಬರ್ ಪ್ಲೇಟ್ ತೆಗೆದು ವಾಹನ ಚಲಾಯಿಸುತ್ತಿದ್ದಾರೆ. ಇಂತಹವರ ವಿರುದ್ಧ ಸಂಚಾರ ಪೊಲೀಸರು ಕಠಿಣ ಕ್ರಮ ಜರುಗಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ – ತುಂಗಾ, ಭದ್ರಾ, ಲಿಂಗನಮಕ್ಕಿಗೆ ಇವತ್ತು ಎಷ್ಟು ಒಳ ಹರಿವಿದೆ? ನೀರಿನ ಮಟ್ಟ ಎಷ್ಟಿದೆ?
LATEST NEWS
- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

- ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

- ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?