ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JULY 2024
SHIRALAKOPPA : ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ (Mishap) ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಮಧ್ಯಾಹ್ನ ಘಟನೆ ಸಂಭವಿಸಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿತ್ತು. ಕಾರು ಶಿವಮೊಗ್ಗ ಕಡೆಯಿಂದ ಆನವಟ್ಟಿ ಕಡೆಗೆ ಹೊಗುತ್ತಿತ್ತು. ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ಸಿನಡಿ ಸಿಲುಕಿದ ಕಾರು ನಜ್ಜುಗುಜ್ಜಾಗಿದೆ. ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಡಬೇಕಾಯಿತು.

ಸದ್ಯ ಚಾಲಕನ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಶಿರಾಳಕೊಪ್ಪ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ CCTV ಕಣ್ತಪ್ಪಿಸಲು ನಂಬರ್ ಪ್ಲೇಟ್ ತೆಗೆಸಿದ್ದ, ಕೊನೆಗೆ ಕಟ್ಟಬೇಕಾಯ್ತು ಭಾರಿ ದಂಡ
LATEST NEWS
- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

- ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

- ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?