ತುಂಗಾ ಜಲಾಶಯದ ಒಳ ಹರಿವು ಕುಸಿತ, 7 ಗೇಟ್‌ಗಳಷ್ಟೆ ಓಪನ್‌

SHIVAMOGGA LIVE NEWS | 6 JULY 2024 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಜಲಾಶಯಕ್ಕೆ ಇವತ್ತು 11,591 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ.

ಇವತ್ತು 7‌ ಗೇಟ್‌ಗಳ ಮೂಲಕ 6,310 ಕ್ಯೂಸೆಕ್ ನೀರು ಹೊಳೆಗೆ ಹರಿಸಲಾಗುತ್ತಿದೆ. ಪವರ್‌ ಹೌಸ್‌ ಮೂಲಕ 4300 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನದಿಂದ ಮಳೆ ಸ್ವಲ್ಪ ತಗ್ಗಿದೆ. ಹಾಗಾಗಿ ಜಲಾಶಯದ ಒಳ ಹರಿವು ಇಳಿಕೆಯಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಪುನರ್ವಸು ಮಳೆ ಉತ್ತಮ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Tunga-Dam-Gajanuru.

Leave a Comment