ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JULY 2024
SHIMOGA : ಜಿಲ್ಲೆಯಲ್ಲಿ ಡೆಂಗ್ಯು ಕಾಯಿಲೆ ಭೀತಿಯ ನಡುವೆ ಝಿಕಾ ವೈರಸ್ (zika virus) ಆತಂಕ ಸೃಷ್ಟಿಯಾಗಿದೆ. ಝಿಕಾ ವೈರಸ್ಗೆ ತುತ್ತಾಗಿದ್ದ ವೃದ್ಧರೊಬ್ಬರು ಶುಕ್ರವಾರ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ 74 ವರ್ಷದ ವ್ಯಕ್ತಿಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿತ್ತು.
ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ. 21ರಂದು ಝಿಕಾ ಸೋಂಕು ಅವರಲ್ಲಿ ಪತ್ತೆಯಾಗಿತ್ತು. ಬಳಿಕ ರಾಷ್ಟ್ರೀಯ ರೋಗ ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಸಂಸ್ಥೆಗೆ ರಕ್ತದ ಮಾದರಿ ಕಳಿಸಿದ್ದು ಅಲ್ಲಿಯೂ ಝಿಕಾ ದೃಢಪಟ್ಟಿತ್ತು. ಅವರಿಗೆ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು.

ಗುರುವಾರ ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಿಸಿಕೊಂಡು ಮನೆಗೆ ಕರೆದೊಯ್ದಿದ್ದರು. ಜ್ವರ ಮಾತ್ರವಲ್ಲದೆ ವಿವಿಧ ಆರೋಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಇನ್ನೊಂದೆಡೆ ಸಾಗರದಲ್ಲಿಯು ಯುವಕನಿಗು ಝಿಕಾ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.
ಏನಿದು ಝಿಕಾ ವೈರಸ್?
ಡೆಂಗ್ಯು ಮತ್ತು ಚಿಕುನ್ ಗುನ್ಯಾ ರೀತಿ ಏಡಿಸ್ ಸೊಳ್ಳೆಯಿಂದ ಝಿಕಾ ಸೋಂಕು ಹರಡುತ್ತದೆ. ಇದು ಮಾರಣಾಂತಿಕ ಸೋಂಕು ಅಲ್ಲ. ಆದರೆ, ಝಿಕಾ ಮೈಕ್ರೊಸೆಫಾಲಿಯೊಂದಿಗೆ ಸಂಬಂಧ ಹೊಂದಿದ್ದಲ್ಲಿ ಸಮಸ್ಯೆ ಉಲ್ಬಣಗೊಳ್ಳಲಿದೆ. ಗರ್ಭಿಣಿಯರ ಭ್ರೂಣದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಜ್ವರ ಕಾಣಿಸಿಕೊಂಡ ತಕ್ಷಣ ಚಿಕಿತ್ಸೆ ಪಡೆಯಬೇಕು. ಸೂಕ್ತ ಸಮಯದಲ್ಲಿ ಪತ್ತೆ ಮತ್ತು ನಿಯಂತ್ರಣದ ಮೂಲಕ ಸೋಂಕು ಹರಡುವುದನ್ನು ತಪ್ಪಿಸಬಹುದು. ಮನೆ ಸುತ್ತಮುತ್ತ ನೀರು ನಿಲ್ಲದ ಹಾಗೆ ನೋಡಿಕೊಳ್ಳಬೇಕು.
ಇದನ್ನೂ ಓದಿ – ಶಿವಮೊಗ್ಗಕ್ಕೆ ಮತ್ತೊಂದು ಹೊಸ ರೈಲು ಮಂಜೂರು, ಸಮಯ ಪ್ರಕಟಿಸಿದ ಸಂಸದ ರಾಘವೇಂದ್ರ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






