ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JULY 2024
SHIMOGA : ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ನಂದಕಿಶೋರ್ ಲಾಹೋಟಿ (67) ಶುಕ್ರವಾರ ಹೃದಯಾಘಾತದಿಂದ (cardiac) ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ. ವಿದೇಶದಿಂದ ಮಕ್ಕಳು ಬಂದ ನಂತರ ಅಂತ್ಯಕ್ರಿಯೆ ನಡೆಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ.
ಮೃತದೇಹವನ್ನು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಶೈತ್ಯಾಗಾರದಲ್ಲಿ ಇರಿಸಲಾಗಿದೆ. 1981ರಲ್ಲಿ ಎಂಬಿಬಿಎಸ್, 1985ರಲ್ಲಿ ಎಂಎಸ್ ಪೂರ್ಣಗೊಳಿಸಿದ್ದ ನಂದಕಿಶೋರ್, ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ್ದರು. 13 ವರ್ಷಗಳಿಂದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯ, ವಿಭಾಗದ ಮುಖ್ಯಸ್ಥ, ವೈದ್ಯಕೀಯ ಅಧಿಕ್ಷಕ, ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸಿದ್ದರು. ಶಸ್ತ್ರಚಿಕಿತ್ಸಾ ವಿಭಾಗದಲ್ಲೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ – ತುಮಕೂರು – ಶಿವಮೊಗ್ಗ ಹೈವೇ ಕಾಮಗಾರಿ ವಿಳಂಬ, ಕಾರಣ ತಿಳಿಸಿದ ಸಂಸದ ರಾಘವೇಂದ್ರ, ಏನದು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





