SHIVAMOGGA LIVE NEWS | 8 JULY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ (Son In Law) ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನಾಳಿಯಲ್ಲಿ ಘಟನೆ ಸಂಭವಿಸಿದ್ದು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರುವಾಗ ಮಾರ್ಗ ಮಧ್ಯದಲ್ಲೆ ಪ್ರತಾಪ್ ಕೊನೆಯುಸಿರೆಳೆದಿದ್ದಾರೆ.
ಜೋಳಕ್ಕೆ ಸಿಂಪಡಿಸುವ ಔಷಧ ಸೇವನೆ
ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ಮೊದಲ ಪತ್ರಿಯ ಪತಿ ಪ್ರತಾಪ್ ಕುಮಾರ್ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವತ್ತು ಹೊನ್ನಾಳಿ ತಾಲೂಕು ಮಲೆಬೆನ್ನೂರು ರಸ್ತೆಯ ಅರಣ್ಯ ಪ್ರದೇಶದಲ್ಲಿ ಪ್ರತಾಪ್ ಕುಮಾರ್, ಜೋಳಕ್ಕೆ ಸಿಂಪಡಿಸುವ ಔಷಧ ಸೇವಿಸಿದ್ದರು. ಅಸ್ವಸ್ಥರಾಗಿ ಪ್ರತಾಪ್ ಅವರೆ ಕುಟುಂಬದವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಕೂಡಲೆ ಸಂಬಂಧಿಕರು, ಸ್ನೇಹಿತರು ಸ್ಥಳಕ್ಕೆ ತೆರಳಿ ಹೊನ್ನಾಳಿಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರುವಾಗ ಕೊನೆಯುಸಿರೆಳೆದಿದ್ದಾರೆ.

ಶವಾಗಾರದ ಬಳಿ ದೌಡಾಯಿಸಿದ ಮುಖಂಡರು
ಪ್ರತಾಪ್ ಕುಮಾರ್ ಆತ್ಮಹತ್ಯೆ ವಿಚಾರ ತಿಳಿದು ಬಿಜೆಪಿ ಮುಖಂಡರು ಮೆಗ್ಗಾನ್ ಆಸ್ಪತ್ರೆಯ ಶವಾಗಾರದ ಬಳಿ ಬಂದು ಬಿ.ಸಿ.ಪಾಟೀಲ್ ಅವರಿಗೆ ಸಾಂತ್ವನ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸೇರಿ ಹಲವು ನಾಯಕರು ಭೇಟಿ ನೀಡಿದ್ದರು.
ಬಿ.ಸಿ.ಪಾಟೀಲ್ ಅವರಿಗೆ ಗಂಡು ಮಗ ಇಲ್ಲ. ಆದರೆ ಪ್ರತಾಪ್ ಅಳಿಯನಾಗಿ ಮಗನ ಸ್ಥಾನ ತುಂಬಿದ್ದರು. ಪ್ರತಾಪ್ ನಮಗೆಲ್ಲ ಪರಿಚಿತರು. ವಿಷಯ ತಿಳಿದು ಇಲ್ಲಿಗೆ ಬಂದು ಬಿ.ಸಿ.ಪಾಟೀಲ್ ಅವರಿಗೆ ಸಾಂತ್ವನ ಹೇಳುತ್ತಿದ್ದೇವೆ.ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

ಪ್ರತಾಪ್ ಸಾವು ಅನಿರೀಕ್ಷಿತ. ಅವರು ರಾಜಕೀಯವಾಗಿ ತುಂಬಾ ಸಕ್ರಿಯವಾಗಿದ್ದರು. ನಿಧನದ ವಿಚಾರ ತಿಳಿದು ನೋವಾಯ್ತು. ಬಿ.ಸಿ.ಪಾಟೀಲ್ ಅವರಿಗೆ ಧೈರ್ಯ ಹೇಳಿದ್ದೇವೆ.ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಹೊನ್ನಾಳಿ ವ್ಯಾಪ್ತಿಯಲ್ಲಿ ಸಂಭವಿಸಿದ ಕಹಿ ಘಟನೆ ಇದು. ಪ್ರತಾಪ್ ಅವರು ಬಿ.ಸಿ.ಪಾಟೀಲ್ ಅವರ ಮನೆ ಮಗನಂತಿದ್ದರು.ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ
ನಾಳೆ ಅಂತ್ಯ ಸಂಸ್ಕಾರ
ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪ್ರತಾಪ್ ಕುಮಾರ್ ಅಂತ್ಯಕ್ರಿಯೆ ಮಂಗಳವಾರ ಚನ್ನಗಿರಿ ತಾಲೂಕು ಕತ್ತಲಗೆರೆ ಗ್ರಾಮದಲ್ಲಿ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಇದನ್ನೂ ಓದಿ – ಜೋಗಕ್ಕೆ ಸಾವಿರ ಸಾವಿರ ಜನ, ಮಳೆ, ಮಂಜಿನ ನಡುವೆ ಕಣ್ತುಂಬಿಕೊಂಡರು ಜಲಪಾತದ ವೈಭವ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






