ಪಿಳ್ಳಂಗೆರೆಯಲ್ಲಿ ಅಪಘಾತ,‌ ಸ್ಲೀಪರ್‌ ಬಸ್‌ ಮೇಲೆ ಬಿದ್ದಿತ್ತು ಕರೆಂಟ್‌ ವಯರ್‌, ತಪ್ಪಿತು ದೊಡ್ಡ ದುರಂತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 JULY 2024

SHIMOGA : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ (bus) ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿದೆ. ಶಿವಮೊಗ್ಗ ತಾಲೂಕು ಪಿಳ್ಳಂಗೆರೆಯಲ್ಲಿ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್‌ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್‌ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರಿಗು ಸಣ್ಣಪುಟ್ಟ ಗಾಯವಾಗಿದೆ.

bus-incident-at-pillangere-in-Shimoga-taluk.

ಬಸ್‌ ಮೇಲೆ ಬಿದ್ದ ಕರೆಂಟ್‌ ವಯರ್‌

ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿಯಾಗುತ್ತಿದ್ದಂತೆ ವಿದ್ಯುತ್‌ ವಯರ್‌ ಬಸ್‌ ಮೇಲೆ ಬಿದ್ದಿತ್ತು. ತಂತಿಯಲ್ಲಿ ಇನ್ನೂ ವಿದ್ಯುತ್‌ ಪ್ರವಹಿಸುತ್ತಿತ್ತು. ಇದೇ ವೇಳೆ ದಾರಿಯಲ್ಲಿ ತೆರಳುತ್ತಿದ್ದ ಇತರೆ ವಾಹನಗಳ ಪ್ರಯಾಣಿಕರು ಕೂಡಲೆ ರಕ್ಷಣೆಗೆ ಧಾವಿಸಿದ್ದರು. ವಿದ್ಯುತ್‌ ಪ್ರವಹಿಸುತ್ತಿರುವುದನ್ನು ಗಮನಿಸಿ ಕೂಡಲೆ ಮೆಸ್ಕಾಂಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಅಲ್ಲದೆ ಅಪಘಾತಕ್ಕೀಡಾದ ಬಸ್ಸಿನಿಂದ ಗಾಬರಿಯಿಂದ ಇಳಿಯುತ್ತಿದ್ದ ಪ್ರಯಾಣಿಕರಿಗೆ ವಯರ್‌ ಬಗ್ಗೆ ಎಚ್ಚರ ವಹಿಸುವಂತೆ ಕೂಗಿ ತಿಳಿಸಿ ಹಲವರ ಪ್ರಾಣ ರಕ್ಷಿಸಿದ್ದಾರೆ.

Private Sleeper bus incident

ನೆರವಾದ ಗ್ರಾಮಸ್ಥರು

ಅಪಘಾತದ ಸದ್ದು ಕೇಳಿ ಪಿಳ್ಳಂಗೆರೆ ಗ್ರಾಮಸ್ಥರು ಕೂಡ ನೆರವಿಗೆ ಧಾವಿಸಿದರು. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತುರ್ತು ನೆರವು ನೀಡಿ, ಆಂಬುಲೆನ್ಸ್‌ಗೆ ಕರೆ ಮಾಡಿದ್ದರು. ಅದೃಷ್ಟವಶಾತ್‌ ದೊಡ್ಡ ಅನಾಹುತ ತಪ್ಪಿದಂತೆ ಆಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Private Sleeper bus incident

ಇದನ್ನೂ ಓದಿ – ಆಯನೂರು ಬಳಿ ಸೇತುವೆ ಪಕ್ಕದ ಹಳ್ಳಕ್ಕೆ ಹಾರಿದ ಕಾರು, ಚಿತ್ರದುರ್ಗದಿಂದ ಬಂದವರು ಆಸ್ಪತ್ರೆಗೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 9, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment