ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 11 JULY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಉಲ್ಬಣಗೊಳ್ಳುತ್ತಿರುವ ಡೆಂಗ್ಯು (Dengue) ಪ್ರಕರಣಗಳನ್ನು ನಿಯಂತ್ರಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಮಹಾ ನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಡೆಂಗ್ಯು ನಿಯಂತ್ರಣದ ಕುರಿತು ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿವಮೊಗ್ಗ ನಗರದಲ್ಲಿ ಡೆಂಗ್ಯು ಪ್ರರಕಣಗಳು ಹೆಚ್ಚಾಗದಂತೆ ಕಟೆಚ್ಚರ ವಹಿಸಿ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಕೋವಿಡ್ ಸಂದರ್ಭದಂತೆ ಪರಿಣಾಮಕಾರಿಯಾಗಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಈವರೆಗೂ 54 ಡೆಂಗ್ಯು ಪಾಸಿಟಿವ್
ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಈವರೆಗೂ 471 ಮಂದಿಗೆ ಡೆಂಗ್ಯು ಪರೀಕ್ಷೆ ಮಾಡಲಾಗಿದೆ. 54 ಮಂದಿಗೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಪ್ರತಿ ವಾರ್ಡ್‌ಗಳಲ್ಲಿ ಲಾರ್ವ ಸಮೀಕ್ಷೆ ನಡೆಸಲಾಗುತ್ತಿದೆ. ಪ್ರತಿ ಶುಕ್ರವಾರ ಡ್ರೈಡೇ ಆಚರಿಸಲಾಗುತ್ತಿದೆ. ಆಶಾ ಕಾರ್ಯಕರ್ತೆರು, ಸ್ಥಳೀಯರು, ವೈದ್ಯಕೀಯ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸರ್ವೆ ಕಾರ್ಯ ಮಾಡಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಈ ಕಾರ್ಯದಲ್ಲಿ ಎಲ್ಲಾ ಇಲಾಖೆಗಳನ್ನು ಬಳಸಿಕೊಳ್ಳಲಾಗಿದೆ. ಗಪ್ಪಿಮೀನು, ಪಾಸಿಟಿವ್ ಕೇಸ್ ಇರವ ಕಡೆಗಳಲ್ಲಿ ಸೊಳ್ಳೆಯನ್ನು ನಿಯಂತ್ರಿಸುವ ಹೊಗೆ ಸಿಂಪಡಣೆ ಮಾಡಲಾಗುತ್ತಿದೆ. ಡೆಂಗ್ಯು ನಿಯಂತ್ರಣದಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯ. ಪ್ರತಿಯೊಬ್ಬರು ಕಾಯಿಲೆಯ ಕುರಿತು ಎಚ್ಚರಿಕೆ ವಹಿಸಬೇಕಾಗಿದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತೆ ಡಾ.ಕವಿತಾ ಯೋಗಪ್ಪನವರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ ಸಿದ್ದನ ಗೌಡ ಪಾಟೀಲ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ, ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮರೆಯಾದ ಮಳೆ, ತಂಪು ತಂಪಾಗಿದೆ ಇಳೆ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?