ಶಿವಮೊಗ್ಗಕ್ಕೆ ಇವತ್ತು ಇಬ್ಬರು ಸಚಿವರ ಭೇಟಿ, ಮಹತ್ವದ ಮೀಟಿಂಗ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JULY 2024

SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಜುಲೈ 11ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪರಿಷತ್ ನೂತನ ಸದಸ್ಯೆ ಬಲ್ಕಿಷ್ ಬಾನು ಅವರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅರಣ್ಯ ಭವನದಲ್ಲಿ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಅರಣ್ಯ ಇಲಾಖೆಯ ಪರಾಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಗೆ ಭೇಟಿ ನೀಡಲಿದ್ದಾರೆ.

Minister-Madhu-Bangarappa

ಸಚಿವ ಈಶ್ವರ ಖಂಡ್ರೆ ಪ್ರವಾಸ

ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಜು.11ರಂದು ಶಿವಮೊಗ್ಗಕ್ಕೆ ಆಗಮಿಸುವರು. ಮಧ್ಯಾಹ್ನ 2 ಗಂಟೆಯಿಂದ ಅರಣ್ಯ ಭವನದಲ್ಲಿ ಸಚಿವ ಖಂಡ್ರೆ ಅವರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.

ಇದನ್ನೂ ಓದಿ – ಇವತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಚುನಾವಣೆ, ಯಾರೆಲ್ಲರ ಹೆಸರು ಕೇಳಿ ಬರ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2024

Leave a Comment