ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JULY 2024
SHIMOGA : ವಿನೋಬನಗರ 100 ಅಡಿ ರಸ್ತೆ ಶಿವಾಲಯ ಪಕ್ಕದಲ್ಲಿನ ಮಾರುಕಟ್ಟೆ (Market) ಸಂಕೀರ್ಣಕ್ಕೆ ಸೂಕ್ತ ಬೆಳಕಿನ ವ್ಯವಸ್ಥೆ ಮತ್ತು ಪ್ರವೇಶದ್ವಾರದ ನ್ಯೂನತೆ ಸರಿಪಡಿಸುವಂತೆ ಆಗ್ರಹಿಸಿ ಜೆಡಿಎಸ್ ನೇತೃತ್ವದಲ್ಲಿ ವ್ಯಾಪಾರಸ್ಥರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಶಾಂತವೇರಿ ಗೋಪಾಲಗೌಡ ವೃತ್ತದಿಂದ ಭಗತ್ಸಿಂಗ್ ವೃತ್ತದವರೆಗೆ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವವರಿಗಾಗಿ ಶಿವಾಲಯದ ಬಳಿ ಮಹಾನಗರ ಪಾಲಿಕೆಯಿಂದ ಮಾರುಕಟ್ಟೆ ನಿರ್ಮಿಸಲಾಗಿದೆ. ಹೂವು, ಹಣ್ಣು ಮತ್ತು ತರಕಾರಿ ಮಾರಾಟ ಮಾಡುತ್ತಿದ್ದ 72 ವ್ಯಾಪಾರಿಗಳನ್ನು ಗುರುತಿಸಿ ಮಳಿಗೆಗಳನ್ನು ಒದಗಿಸಲಾಗಿದೆ.
ಈ ಮಾರುಕಟ್ಟೆ ಪ್ರಾಂಗಣದ ಪ್ರವೇಶ ದ್ವಾರ ಬಹಳ ಚಿಕ್ಕದಿದೆ. ಅಲ್ಲದೆ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಾಗಿರುದೆ. ಇದರಿಂದ ಸಾರ್ವಜನಿಕರು ಪ್ರಾಂಗಣದೊಳಗೆ ಬರುವುದಿಲ್ಲ. ಗ್ರಾಹಕರಿಲ್ಲದ ಕಾರಣಕ್ಕೆ ವ್ಯಾಪಾರಿಗಳು ಮತ್ತೆ ಬೀದಿಯಲ್ಲಿ ಕುಳಿತು ವ್ಯಾಪಾರ ಮಾಡುವಂತಾಗಿದೆ. ಹೀಗಾಗಿ ಪ್ರಾಂಗಣದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಿ ಪ್ರವೇಶ ದ್ವಾರವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿ.ಸುರೇಶ್, ನರಸಿಂಹ, ಶ್ಯಾಮ್, ದಯಾನಂದ್, ಸಂಜಯ್, ವಿನಯ್ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ – ಅರಣ್ಯಾಧಿಕಾರಿಗಳ ದಾಳಿ, ವಾಹನ ಸಹಿತ ಇಬ್ಬರು ಆರೋಪಿಗಳು ಅರೆಸ್ಟ್, ಮೂವರು ಎಸ್ಕೇಪ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






