ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JULY 2024
SAGARA : ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನು ಮಾಪನ ಇಲಾಖೆಯ ಸೀಲು ಹಾಳು ಮಾಡಿದ ಆರೋಪದ ಹಿನ್ನೆಲೆ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್ ಬಂಕ್‌ನ್ನು (Bunk) ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ.
ಘಟಕದಲ್ಲಿನ ಮದರ್ ಬೋರ್ಡ್ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ ಅವಧಿಯವರೆಗೆ ಕಾನೂನು ಮಾಪನಶಾಸ್ತ್ರ ಇಲಾಖೆ ಪರಿಶೀಲಿಸಿ, ಸೀಲ್ ಮಾಡುವ ನಿಯಮ ಚಾಲ್ತಿಯಲ್ಲಿದೆ. ಅಳತೆಯಲ್ಲಿ ಗ್ರಾಹಕರಿಗೆ ವಂಚಿಸುವ ಉದ್ದೇಶದಿಂದ ಈ ಸೀಲ್‌ನ್ನು ಒಡೆದು ಪ್ರತ್ಯೇಕ ಮದರ್ ಬೋರ್ಡ್ ಅಳವಡಿಸಿರುವುದು ಕಂಪನಿಯ ಗಮನಕ್ಕೆ ಬಂದಿತ್ತು.

ಇದೇ ತಿಂಗಳ 5ರಂದು ಗೋಗ್ಯಾಸ್ ಕಂಪನಿಯ ವಿಚಕ್ಷಣ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಕಾನೂನು ಬಾಹಿರ ಕೃತ್ಯ ಬೆಳಕಿಗೆ ಬಂದಿದೆ. ಕಂಪನಿ ಈ ಸಂಬಂಧ ಶಿವಮೊಗ್ಗದ ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ದೂರು ನೀಡಿದ್ದು ಬುಧವಾರ ಸ್ಥಳಕ್ಕೆ ಆಗಮಿಸಿದ ಇಲಾಖೆ ಸಹಾಯಕ ನಿಯಂತ್ರಕ ಹೆಚ್.ಎಸ್.ರಾಜು ಹಾಗೂ ಸಿಬ್ಬಂದಿ ವರ್ಗದವರು ಮಹಜರ್ ಕ್ರಮ ಜರುಗಿಸಿ ಬಂಕ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಗ್ರಾಹಕರಿಗೆ ವಂಚಿಸಿದ ಆರೋಪದ ಮೇರೆಗೆ ಮಾಲೀಕ ಎಂ. ಆರ್.ಮಹೇಶ್ವರಪ್ಪ ವಿರುದ್ಧ ಸಾಗರದ ಜೆಎಂಎಫ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಕುಸಿತ, ಎಷ್ಟು ನೀರು ಹರಿದು ಬರುತ್ತಿದೆ?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















