ಶಿವಮೊಗ್ಗ ಜಿಲ್ಲೆಗೆ ಇನ್ನು ನಾಲ್ಕು ದಿನ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

SHIVAMOGGA LIVE NEWS | 14 JULY 2024

RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಬಿರುಸು ಪಡೆದುಕೊಳ್ಳುತ್ತಿದೆ. ಇನ್ನು ನಾಲ್ಕು ದಿನ ಭಾರಿ ಮಳೆಯ ಅಲರ್ಟ್‌ ಪ್ರಕಟಿಸಲಾಗಿದೆ. ಇನ್ನು, ಕಳೆದ 24 ಗಂಟೆಯಲ್ಲಿ ಸಾಗರ, ಹೊಸನಗರ, ತೀರ್ಥಹಳ್ಳಿಯಲ್ಲಿ ಮಳೆ ಅಬ್ಬರಿಸಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

ಜುಲೈ 13ರ ಬೆಳಗ್ಗೆ 8.30 ರಿಂದ ಜುಲೈ 14ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಭದ್ರಾವತಿಯಲ್ಲಿ 8.4 ಮಿ.ಮೀ, ಹೊಸನಗರದಲ್ಲಿ 69.4 ಮಿ.ಮೀ, ಸಾಗರದಲ್ಲಿ 71.9 ಮಿ.ಮೀ, ಶಿಕಾರಿಪುರದಲ್ಲಿ 14.2 ಮಿ.ಮೀ, ಶಿವಮೊಗ್ಗದಲ್ಲಿ 14.6, ಸೊರಬದಲ್ಲಿ 23.3 ಮಿ.ಮೀ, ತೀರ್ಥಹಳ್ಳಿಯಲ್ಲಿ 56.7 ಮಿ.ಮೀ ಮಳೆಯಾಗಿದೆ.

rain-in-shimoga-city-near-NCC-Office.

ಇನ್ನು ನಾಲ್ಕು ದಿನ ಅಲರ್ಟ್‌

ಜಿಲ್ಲೆಯಲ್ಲಿ ಇನ್ನು ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜು.15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಜು.16 ರಿಂದ 18ರವರೆಗೆ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ. ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ.

Kalleshwara-Enterprises.webp

ಇದನ್ನೂ ಓದಿ ⇓

ಶಿವಮೊಗ್ಗ KSRTC ನಿಲ್ದಾಣದಲ್ಲಿ ಕಳ್ಳತನ ಕೇಸ್‌, ಭದ್ರಾವತಿಯ 5 ಮಹಿಳೆಯರು ಅರೆಸ್ಟ್‌

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment