ಬ್ಯಾಂಕಿಂಗ್‌ ಪರೀಕ್ಷೆ, ಶಿವಮೊಗ್ಗದಲ್ಲಿ ಒಂದು ದಿನದ ಕಾರ್ಯಾಗಾರ, ಹೆಸರು ನೋಂದಾಯಿಸಲು ಅವಕಾಶ, ಇಲ್ಲಿದೆ ಮಾಹಿತಿ

Published On : ಜುಲೈ 15, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | 15 JULY 2024

SHIMOGA : ಬ್ಯಾಂಕಿಂಗ್‌ ಪರೀಕ್ಷೆಯಲ್ಲಿ (Banking Exam) ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಬೇಕು, ಈ ಕ್ಷೇತ್ರದಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಬ್ಯಾಂಕಿಂಗ್‌ ಉದ್ಯೋಗಿಗಳ ಕನ್ನಡ ಕೂಟವು ಶಿವಮೊಗ್ಗದಲ್ಲಿ ಬ್ಯಾಂಕಿಂಗ್‌ ಪರೀಕ್ಷೆ ಮಾಹಿತಿ ಕಾರ್ಯಕ್ರಮ ಆಯೋಜಿಸಿದೆ.

ಜು.17ರಂದು ಶಿವಮೊಗ್ಗದ ಎಟಿಎನ್‌ಸಿ ಕಾಲೇಜು ಚಂದನ ಸಭಾಂಗಣದಲ್ಲಿ ಒಂದು ದಿನದ ಜಿಲ್ಲಾಮಟ್ಟದ ಮಾಹಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಬ್ಯಾಂಕಿಂಗ್‌ ಪರೀಕ್ಷೆ ತರಬೇತುದಾರ ಮತ್ತು ಪತ್ರಿಕೆಗಳಲ್ಲಿ ಪರೀಕ್ಷೆ ಲೇಖನ ಬರಹಗಾರ ಆರ್.ಕೆ.ಬಾಲಚಂದ್ರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.

jobs news shivamogga live

ಆಸಕ್ತರು ಕೂಡಲೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಮಧ್ಯಾಹ್ನದ ಊಟದ ವ್ಯವಸ್ಥೆ ಇರಲಿದೆ. ಕಾರ್ಯಕ್ರಮದ ಕೊನೆಯಲ್ಲಿ ಪರೀಕ್ಷಾ ಸಿದ್ಧತೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಹರೀಶ್‌ ಕುಮಾರ್‌ 9743461647, ಮಂಜುನಾಥ್‌ 9742475368, ಸೌಮ್ಯಾ 9481836251 ಮೊಬೈಲ್‌ ನಂಬರ್‌ ಸಂಪರ್ಕಿಸಬಹುದು.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜುಲೈ 15, 2024

Leave a Comment