ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 JULY 2024
THIRTHAHALLI : ಕುರುವಳ್ಳಿ – ಬಾಳೆಬೈಲು ನಡುವಿನ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ (Bypass) ರಸ್ತೆಯಲ್ಲಿ ತಡೆಗೋಡೆ ಮುರಿದು ಬಿದ್ದಿವೆ. ಇದರಿಂದ ಮತ್ತಷ್ಟು ಮಣ್ಣು ರಸ್ತೆ ಮೇಲೆ ಬಿದ್ದಿದೆ. ಸಂಜೆ ವೇಳೆಗೆ ಸುರಿದ ಗಾಳಿ, ಮಳೆಗೆ ತಡೆಗೋಡೆ ಕುಸಿದು ಬಿದ್ದಿವೆ.
ಸೋಮವಾರ ಧರೆ ಕುಸಿತದಿಂದ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ತೀರ್ಥಹಳ್ಳಿ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿತ್ತು. ತೀರ್ಥಹಳ್ಳಿಯಲ್ಲಿ ಇವತ್ತು ಕೂಡ ಮಳೆ ಮುಂದುವರೆದಿದ್ದು, ತಡೆಗೋಡೆ ಪೂರ್ತಿ ಕುಸಿದಿದೆ. ಹಾಗಾಗಿ ಎತ್ತರದ ಪ್ರದೇಶದಿಂದ ಮಣ್ಣು ಸಂಪೂರ್ಣವಾಗಿ ಬೈಪಾಸ್ ರಸ್ತೆಗೆ ಬಂದು ಬಿದ್ದಿದೆ.

ಧರೆ ಕುಸಿತದ ಹಿನ್ನೆಲೆ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ರಸ್ತೆಗೆ ಉರುಳುವ ಸ್ಥಿತಿಯಲ್ಲಿದ್ದ ಮರವೊಂದನ್ನು ಕಡಿದು ಬಳಿಕ ಇವತ್ತು ಮಧ್ಯಾಹ್ನ ರಸ್ತೆಯ ಒಂದು ಬದಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ತಡೆಗೋಡೆ ಕುಸಿದಿದ್ದರಿಂದ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಇದನ್ನೂ ಓದಿ ⇓
ಅಂಜನಾಪುರ ಜಲಾಶಯ ಭರ್ತಿ, ಕೋಡಿ ಬಿದ್ದ ವಿಷಯ ತಿಳಿದು ರೈತರು ಹರ್ಷ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





