ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 JULY 2024
DAM LEVEL : ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಹೆಚ್ಚಳವಾಗುತ್ತಿದೆ. ಇವತ್ತು 71,910 ಕ್ಯೂಸೆಕ್ ಒಳ ಹರಿವು ಇದೆ.
ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಪ್ರಸ್ತುತ ಜಲಾಶಯಕ್ಕೆ 70497 ಒಳ ಹರಿವು ಇದೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಗಾಜನೂರಿನ ತುಂಗಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಲಾಶಯದ ಒಳ ಹರಿವು, ಹೊರ ಹರಿವು ಮತ್ತು ನಿರ್ವಹಣೆ ಕುರಿತು ಇಂಜಿನಿಯರ್ಗಳಿಂದ ಮಾಹಿತಿ ಪಡೆದರು. ಅಲ್ಲದೆ ಜಲಾಶಯದ ವಿವಿಧೆಡೆ ತೆರಳಿ ಪರಿಶೀಲನೆ ನಡೆಸಿದರು.ಜಲಾಶಯಕ್ಕೆ ಜಿಲ್ಲಾಧಿಕಾರಿ ಭೇಟಿ
ಇನ್ನೊಂದೆಡೆ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಶಿವಮೊಗ್ಗದಲ್ಲಿ ಮಹಿಳೆಯರು ವಿಶೇಷ ಪೂಜೆ ಸಲ್ಲಿಸಿದರು. ಆರತಿ ಬೆಳಗಿ, ಗಂಗೆ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ನಗರದ ವಿವಿಧೆಡೆಯಿಂದ ಆಗಮಿಸಿ ಪೂಜೆ ಸಲ್ಲಿಸಿದರು.ಕೋರ್ಪಲಯ್ಯ ಛತ್ರದ ಬಳಿ ತುಂಗೆಗೆ ಪೂಜೆ
ಇದನ್ನೂ ಓದಿ ⇓
ಹೊಸನಗರದಲ್ಲಿ ಮುಂದುವರೆದ ಮಳೆ, ನೂತನ ಸೇತುವೆಯ ಪಿಚ್ಚಿಂಗ್ ಕುಸಿತ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422