BREAKING NEWS – ಶಿವಮೊಗ್ಗಕ್ಕೆ ಇವತ್ತು ರೆಡ್‌ ಅಲರ್ಟ್‌ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

RAINFALL REPORT : ಬುಧವಾರ ತುಸು ಬಿಡುವು ನೀಡಿದ್ದ ಮಳೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಪುನಃ ಅಬ್ಬರಿಸಲಿದೆ. ಶಿವಮೊಗ್ಗ ಸೇರಿದಂತೆ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಇವತ್ತು ರೆಡ್‌ ಅಲರ್ಟ್‌ (RED ALERT) ಘೋಷಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾತ್ರಿಯಿಂದಲೇ ಅಬ್ಬರಿಸುತ್ತಿದೆ ಮಳೆ

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಳೆದ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ ತಾಲೂಕಿನ ವಿವಿಧೆಡೆ ಬೆಳಗ್ಗೆ ಭಾರಿ ಮಳೆಯಾಗಿದೆ.

ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ನಿರಂತರ ಮತ್ತು ಭಾರಿ ಮಳೆಯ ಹಿನ್ನೆಲೆ ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲೂಕುಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಷಲಾಗಿದೆ. ಈ ಭಾಗದಲ್ಲಿ ನಿರಂತರ ಮಳೆಯಿಂದ ನದಿ, ಹಳ್ಳ,  ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲಲ್ಲಿ ಭೂ ಕುಸಿತ ಉಂಟಾಗಿದೆ. ಮರಗಳು ಬಿದ್ದು ಮನೆಗಳು ಹಾನಿಗೀಡಾಗಿವೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment