BREAKING NEWS – ಶಿವಮೊಗ್ಗ, ಭದ್ರಾವತಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

SHIVAMOGGA LIVE NEWS | 18 JULY 2024 ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

RAINFALL NEWS : ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಎಡೆಬಿಡದೆ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ (HOLIDAY).

ಸದ್ಯ ಶಿಕಾರಿಪುರ ತಾಲೂಕು ಹೊರತುಪಡಿಸಿದರೆ ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಹೊಸನಗರ, ಸಾಗರ, ತೀರ್ಥಹಳ್ಳಿ ಮತ್ತು ಸೊರಬ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದರಿಂದ ನಿನ್ನೆಯೇ ರಜೆ ಘೋಷಿಸಲಾಗಿತ್ತು. ಶಿವಮೊಗ್ಗ, ಭದ್ರಾವತಿ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಮಳೆ ಪ್ರಮಾಣ ತಗಿದ್ದರಿಂದ ರಜೆ ಘೋಷಣೆ ಆಗಿರಲಿಲ್ಲ. ಆದರೆ ಕಳೆದ ರಾತ್ರಿಯಿಂದ ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಜೋರು ಮಳೆಯಾಗುತ್ತಿದೆ. ಅಲ್ಲದೆ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ರೆಡ್‌ ಅಲರ್ಟ್‌ ಪ್ರಕಟಿಸಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment