SHIVAMOGGA LIVE NEWS | 18 JULY 2024 ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
SHIMOGA : ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಈ ಮಧ್ಯೆ ಪದವಿ ಕಾಲೇಜುಗಳಿಗೆ ರಜೆ ಇದೆಯ ಎಂಬ ಗೊಂದಲ ನಿರ್ಮಾಣವಾಗಿತ್ತು.
ಜಿಲ್ಲಾಧಿಕಾರಿ ಆದೇಶದಲ್ಲಿ ಸ್ಪಷ್ಟನೆ
ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.