SHIVAMOGGA LIVE NEWS | 19 JULY 2024 (ಈ ಸುದ್ದಿಯನ್ನು ಇನ್ನು 59 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
DAM LEVEL : ಮಲೆನಾಡು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಗೆ ಮೂರು ಪ್ರಮುಖ ಜಲಾಶಯಗಳಿಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯ ಭರ್ತಿಯಾಗಿದ್ದು ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಉತ್ತಮ ಒಳ ಹರಿವು ಇದೆ.
ಕಳೆದ ಎರಡು ದಿನಕ್ಕೆ ಹೋಲಿಸಿದರೆ ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇವತ್ತು ತುಸು ಕಡಿಮೆಯಾಗಿದೆ. 64,764 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯ
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 87,496 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1791.50 ಅಡಿ ತಲುಪಿದೆ. 76.40 ಟಿಎಂಸಿ ನೀರು ಸಂಗ್ರಹವಾಗಿದೆ. ಲಿಂಗನಮಕ್ಕಿ ಜಲಾಶಯ
ಭದ್ರಾ ಜಲಾಶಯದ ಒಳ ಹರಿವು ಉತ್ತಮವಾಗಿದೆ. ಇವತ್ತು 49555 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 157.11 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 41.06 ಟಿಎಂಸಿ ನೀರು ಸಂಗ್ರಹವಾಗಿದೆ. ಭದ್ರಾ ಜಲಾಶಯ
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ
