ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 JULY 2024
LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಸ್.ಪ್ರಕಾಶ್ ಮತ್ತು ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್ ಅವರ ಮನೆಗಳ ಮೇಲೆ ಇವತ್ತು ಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ಇವತ್ತು ರಾಜ್ಯದ 12 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. 12 ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಸಂದರ್ಭ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ, ಭದ್ರಾವತಿಯಲ್ಲಿ ಏನೆಲ್ಲ ಸಿಕ್ತು?
ಒಟ್ಟು 2.07 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಪ್ರಕಾಶ್ ಅವರ ಹೆಸರಿನಲ್ಲಿ 2 ವಾಸದ ಮನೆಗಳು, 2 ಎಕರೆ 8 ಗುಂಟೆ ಜಮೀನು ಇದ್ದು ಇದರ ಮೌಲ್ಯ 1.40 ಕೋಟಿ ರೂ. ಮನೆಯಲ್ಲಿ 12.86 ಲಕ್ಷ ರೂ. ನಗದು, 38.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 11.30 ಲಕ್ಷ ರೂ. ಮೌಲ್ಯದ ಇತರೆ ವಸ್ತುಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.ಎಸ್.ಪ್ರಕಾಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ
⇒ ದಾಳಿಯಾದ ಸ್ಥಳ : ಕೃಷಿ ನಗರದಲ್ಲಿರುವ ಮನೆ ಸೇರಿ ಮೂರು ಕಡೆ
ಏನೆಲ್ಲ ಪತ್ತೆಯಾಯ್ತು?

ಭದ್ರಾವತಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡ ನಾಗೇಶ್ ಅವರ ಬಳಿ ಒಟ್ಟು 2.19 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ನಾಗೇಶ್ ಅವರಿಗೆ 2 ನಿವೇಶನ, 2 ವಾಸದ ಮನೆ, 5 ಎಕರೆ 14 ಗುಂಟೆ ಕೃಷಿ ಜಮೀನು ಇದ್ದು ಇದರ ಒಟ್ಟು ಮೌಲ್ಯ 1.92 ಕೋಟಿ ಎಂದು ಅಂದಾಜಿಸಲಾಗಿದೆ. ಮನೆಯಲ್ಲಿ 5.71 ಲಕ್ಷ ರೂ. ನಗದು, 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 1.76 ಲಕ್ಷ ರೂ. ಮೌಲ್ಯದ ವಾಹನಗಳು, 7 ಲಕ್ಷ ಮೌಲ್ಯದ ಇತರೆ ವಸ್ತುಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.ನಾಗೇಶ್, ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ
⇒ ದಾಳಿಯಾದ ಸ್ಥಳ : ಅಂತರಗಂಗೆಯಲ್ಲಿರುವ ಮನೆ ಸೇರಿ 5 ಕಡೆ
ಏನೆಲ್ಲ ಪತ್ತೆಯಾಯ್ತು?
ಲೋಕಾಯುಕ್ತ ಎಸ್‌ಪಿ ಮಂಜುನಾಥ ಚೌದರಿ ನೇತೃತ್ವದಲ್ಲಿ ದಾಳಿ ನಡೆದಿತ್ತು.
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














