ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JULY 2024
SHIMOGA : ಮಳೆ ಮುಂದುವರೆದ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ (Holiday) ಘೋಷಿಸಿ ತಹಶೀಲ್ದಾರ್ ಗಿರೀಶ್ ಅವರು ರಜೆ ಘೋಷಿಸಿದ್ದಾರೆ.
ಈ ಸಂಬಂಧ ಶಿವಮೊಗ್ಗ ಲೈವ್.ಕಾಂಗೆ ಮಾಹಿತಿ ನೀಡಿರುವ ತಹಶೀಲ್ದಾರ್ ಗಿರೀಶ್ ಅವರು, ‘ಶಿವಮೊಗ್ಗ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಕ್ಕಳ ಹಿತದೃಷ್ಟಿಯಿಂದ ಜುಲೈ 20 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆʼ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ತಾಲೂಕು ಹೊರತುಪಡಿಸಿ ಉಳಿದ ಆರು ತಾಲೂಕುಗಳಿಗೆ ಶುಕ್ರವಾರ ರಾತ್ರಿಯೇ ರಜೆ ಪ್ರಕಟಿಸಲಾಗಿತ್ತು. ಶಿವಮೊಗ್ಗ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಯಾಗಿದ್ದ ಹಿನ್ನೆಲೆ ರಜೆ ಘೋಷಿಸಿರಲಿಲ್ಲ. ಆದರೆ ರಾತ್ರಿಯಿಂದ ನಿಂತರರ ಮಳೆ ಸುರಿದ ಹಿನ್ನೆಲೆ ಶಿವಮೊಗ್ಗ ತಾಲೂಕಿಗೆ ಈಗ ರಜೆ ಪ್ರಕಟಿಸಲಾಗಿದೆ. ಹಾಗಾಗಿ ಇಡೀ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳು, ಅಂಗನವಾಡಿಗಳಿಗೆ ಇವತ್ತೂ ರಜೆ ಘೋಷಣೆಯಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಸಿಟಿಯಲ್ಲಿ ಮಳೆ ಅಬ್ಬರಕ್ಕೆ ಮರಗಳು ಧರೆಗೆ, ಸ್ಟೇಡಿಯಂ ಮುಳುಗಡೆ, ಕಾಳಜಿ ಕೇಂದ್ರ ಶುರು
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















