ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JULY 2024
DAM LEVEL : ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಗಳಿಗೆ ಉತ್ತಮ ಒಳ ಹರಿವು ಇದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವಿನ ವಿವರ ಇಲ್ಲಿದೆ.
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 69,724 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯದ ನೀರಿನ ಸಂಗ್ರಹ ಮಟ್ಟ 1794.50 ಅಡಿಗೆ ಏರಿಕೆಯಾಗಿದೆ. ಒಟ್ಟು 151.64 ಟಿಎಂಸಿ ಸಾಮರ್ಥ್ಯದ ಡ್ಯಾಮ್ನಲ್ಲಿ ಈವರೆಗು 82.42 ಟಿಎಂಸಿ ನೀರು ಸಂಗ್ರಹವಾಗಿದೆ. ಲಿಂಗನಮಕ್ಕಿ ಜಲಾಶಯ
ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 63,744 ಕ್ಯೂಸೆಕ್ಗೆ ತಲುಪಿದೆ. ಈಗಾಗಲೇ ಜಲಾಶಯ ಭರ್ತಿಯಾಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ತುಂಗಾ ಜಲಾಶಯ

ಭದ್ರಾ ಜಲಾಶಯಕ್ಕೆ ಇವತ್ತು 46,876 ಕ್ಯೂಸೆಕ್ ಒಳ ಹರಿವು ಇದೆ. 186 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 162.3 ಅಡಿಗೆ ಏರಿಕೆಯಾಗಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಈವರೆಗೆ 45.040 ಟಿಎಂಸಿ ನೀರು ಸಂಗ್ರಹವಾಗಿದೆ. ಭದ್ರಾ ಜಲಾಶಯ
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ಎರಡು ದಿನ ಸಚಿವ ಮಧು ಬಂಗಾರಪ್ಪ ಪ್ರವಾಸ, ಮಳೆ ಹಾನಿ ಪ್ರದೇಶಕ್ಕೆ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















