ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ಒಳ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 JULY 2024

DAM LEVEL : ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ.

ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು?

 ಲಿಂಗನಮಕ್ಕಿ ಜಲಾಶಯ 

ಲಿಂಗನಮಕ್ಕಿ ಜಲಾಶಯದ ಒಳ ಹರಿವು 48,793 ಕ್ಯೂಸೆಕ್‌ ಇದೆ. 1844 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದಲ್ಲಿ 1796.05 ಅಡಿ ನೀರಿದೆ. ಒಟ್ಟು 151.64 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 86.47 ಟಿಎಂಸಿ ನೀರು ಇದೆ.

 ತುಂಗಾ ಜಲಾಶಯ 

ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆ ಇವತ್ತು 37,290 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವ ಹಿನ್ನೆಲೆ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಶನಿವಾರ 60 ಸಾವಿರ ಕ್ಯೂಸೆಕ್‌ ಒಳ ಹರಿವು ಇತ್ತು. ಇವತ್ತು ಒಳ ಹರಿವು ಪ್ರಮಾಣ ಕುಸಿತ ಕಂಡಿದೆ.

 ಭದ್ರಾ ಜಲಾಶಯ 

ಭದ್ರಾ ಜಲಾಶಯಕ್ಕು ಕೂಡ ಒಳ ಹರಿವು ತಗ್ಗಿದೆ. ಇವತ್ತು 23,674 ಕ್ಯೂಸೆಕ್‌ ಒಳ ಹರಿವು ಇದೆ. 191 ಕ್ಯೂಸೆಕ್‌ ಹೊರ ಹರಿವು. ಜಲಾಶಯದ ನೀರಿನ ಮಟ್ಟ 164.4 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ 47.06 ಟಿಎಂ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಕೆ, ಹವಾಮಾನ ಇಲಾಖೆಯಿಂದ ಮತ್ತೊಂದು ಅಲರ್ಟ್‌ ಪ್ರಕಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment