ಶಿವಮೊಗ್ಗ ಜಿಲ್ಲೆಯಲ್ಲಿ ತಗ್ಗಿದ ಮಳೆ, ಹೇಗಿದೆ ವಾತಾವರಣ? ಶಾಲೆ, ಕಾಲೇಜು ಪುನಾರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JULY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಆದರೆ ಎಲ್ಲೆಡೆ ಥಂಡಿ ವಾತಾವರಣ ಇದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್.‌ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜಿಲ್ಲೆಯ ವಿವಿಧೆಡೆ ಆಗಾಗ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಶಾಲೆ, ಕಾಲೇಜುಗಳು ಪುನಾರಂಭ

ಭಾರಿ ಮಳೆ ಹಿನ್ನೆಲೆ ಕಳೆದ ವಾರ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಈಗ ವರುಣನ ಅಬ್ಬರ ತಗ್ಗಿರುವ ಹಿನ್ನೆಲೆ ಸೋಮವಾರದಿಂದ ಶಾಲೆ, ಕಾಲೇಜುಗಳು ಪುನಾರಂಭವಾಗಲಿವೆ. ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿತ್ತು. ಈ ತಾಲೂಕುಗಳಲ್ಲಿ ಈಗ ಮಳೆ ಕಡಿಮೆಯಾಗಿದೆ. ಮೂರು ತಾಲೂಕುಗಳಲ್ಲಿ ಇಂದಿನಿಂದ ಶಾಲೆ, ಕಾಲೇಜುಗಳು ಪುನಾರಂಭವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ತಾಲೂಕುಗಳಲ್ಲಿಯು ಮಳೆ ಪ್ರಮಾಣ ಕಡಿಮೆ ಇರುವುದರಿಂದ ಶಾಲೆ, ಕಾಲೇಜುಗಳು ಎಂದಿನಿಂತೆ ಕಾರ್ಯನಿರ್ವಹಿಸಲಿವೆ.

ಇದನ್ನೂ ಓದಿ ⇓

ಶಿವಮೊಗ್ಗದಲ್ಲಿ ಪತಿಯೊಂದಿಗೆ ಬಸ್‌ ಹತ್ತಿದ್ದ ಮಹಿಳೆಗೆ ಸ್ವಲ್ಪ ಸಮಯದಲ್ಲಿ ಕಾದಿತ್ತು ಆಘಾತ, ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment