12 ಲಕ್ಷದ ಚಿನ್ನ, ಬೆಳ್ಳಿ, 5 ಲಕ್ಷ ಹಣ, ಗ್ರಾಮ ಪಂಚಾಯಿತಿ ಅ‍ಧ್ಯಕ್ಷನ ಬಳಿ ಕೋಟಿ ರೂ. ಮೀರಿದ ಅಕ್ರಮ ಸಂಪಾದನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JULY 2024

LOKAYUKTA RAID : ಆದಾಯಕ್ಕಿಂತಲು ಹೆಚ್ಚು ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭದ್ರಾವತಿಯ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ನಾಗೇಶ್‌ಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಜುಲೈ 19ರಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ಸಂದರ್ಭ ಏನೆಲ್ಲ ಪತ್ತೆಯಾಗಿದೆ ಎಂಬುದರ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದೆ.

ದಾಳಿಯಲ್ಲಿ ಏನೆಲ್ಲ ಸಿಕ್ತು?

ನಾಗೇಶ್‌ಗೆ ಸಂಬಂಧಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ ಕೃಷಿ ಜಮೀನು ಪತ್ತೆಯಾಗಿದೆ. 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, 1.76 ಲಕ್ಷ ರೂ. ಮೌಲ್ಯದ ವಾಹನಗಳು, 7 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು, 5,71,640 ರೂ. ನಗದು. ಪತ್ತೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Money-Gold-found-at-antaragange-gp-presiden-house.

ಅಂದಾಜು 1.33 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿದೆ. ಅವರ ಮನೆಯಲ್ಲಿ ಪತ್ತೆಯಾದ 5 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದ ಪೊಲೀಸ್ ಅಧೀಕ್ಷಕ ಮಂಜುನಾಥ ಚೌದರಿ ಎಂ.ಹೆಚ್. ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ವೀರಬಸಪ್ಪ ಎಲ್.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ. ಶಿವಮೊಗ್ಗ, ಚಿತ್ರದುರ್ಗ, ಉಡುಪಿ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ ⇓

ಕಂತೆ ಕಂತೆ ದುಡ್ಡು, ಲಕ್ಷ ಲಕ್ಷದ ಚಿನ್ನ, ಶಿವಮೊಗ್ಗದ ಅಧಿಕಾರಿಯ ಮನೆ, ಲಾಕರ್‌ನಲ್ಲಿ ಸಿಕ್ಕ ಹಣ ಸೀಜ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 22, 2024

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment