ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 JULY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
DAM LEVEL : ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಗಳ ಒಳ ಹರಿವು ಪ್ರಮಾಣ ತಗ್ಗಿದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಎಷ್ಟಿದೆ ಎಂಬುದರ ವಿವರ ಇಲ್ಲಿದೆ.
ಲಿಂಗನಮಕ್ಕಿ ಜಲಾಶಯದ ಒಳ ಹರಿವು 41,269 ಕ್ಯೂಸೆಕ್ ಇದೆ. 2400 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1799 ಅಡಿಗೆ ತಲುಪಿದೆ. ಒಟ್ಟು 151.65 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 93.50 ಟಿಎಂಸಿ ನೀರು ಸಂಗ್ರಹವಾಗಿದೆ.
ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಕಡಿಮೆಯಾಗಿದೆ. ಇವತ್ತು ಜಲಾಶಯದಿಂದ 31,362 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ತೀರ್ಥಹಳ್ಳಿ ಭಾಗದಲ್ಲಿ ಮಳೆ ಕಡಿಮೆ ಆಗಿರುವುದರಿಂದ ತುಂಗಾ ಜಲಾಶಯಕ್ಕೆ ಒಳ ಹರಿವು ಇಳಿಕೆಯಾಗಿದೆ.
ಭದ್ರಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 20,045 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 196 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 168.2 ಅಡಿಗೆ ಏರಿಕೆಯಾಗಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 71.5 ಟಿಎಂಸಿ. ಇವತ್ತು 50.95 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆಯಿಂದ ಅಲರ್ಟ್, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಮಳೆ?