ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 26 JULY 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಜೋರಾದ ಹಿನ್ನೆಲೆ ಮೂರು ಪ್ರಮುಖ ಜಲಾಶಯಗಳ (Dam) ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಯಾವ್ಯಾವ ಜಲಾಶಯಕ್ಕೆ ಎಷ್ಟು ಒಳ ಹರಿವು ಇದೆ, ನೀರಿನ ಮಟ್ಟ ಎಷ್ಟಾಗಿದೆ. ಇಲ್ಲಿದೆ ಡಿಟೇಲ್ಸ್.‌

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇವತ್ತು 65,147 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 1804.80 ಅಡಿಗೆ ತಲುಪಿದೆ. ಒಟ್ಟು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ ಈವರೆಗೆ 108.31 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದಲ್ಲಿ ಇವತ್ತು ಗಂಗೆ ಪೂಜೆ ನೆರವೇರಿಸಲಾಗುತ್ತಿದೆ.

DAM-LEVEL-TUNGA-DAM.webpತುಂಗಾ ಜಲಾಶಯದ ಒಳ ಹರಿವು ಕೂಡ ಏರಿಕೆಯಾಗಿದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು 63,942 ಕ್ಯೂಸೆಕ್‌ ಒಳ ಹರಿವು ಇದೆ. ತೀರ್ಥಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಳೆ ಜೋರಾಗಿದ್ದು, ಇವತ್ತು ಒಳ ಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಕೂಡ ಚೇತರಿಕೆ ಕಂಡಿದೆ. ಇವತ್ತು 35,318 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 202 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 174.3 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇವತ್ತು ಆರೆಂಜ್‌ ಅಲರ್ಟ್‌ ಇದ್ದು, ಮಳೆ ಜೋರಾಗಲಿದೆ. ಹಾಗಾಗಿ ಭದ್ರಾ ಜಲಾಶಯಕ್ಕೆ ಇವತ್ತು ಉತ್ತಮ ಒಳ ಹರಿವು ದಾಖಲಾಗಲಿದೆ.

ಇದನ್ನೂ ಓದಿ ⇓

ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌, ಜೋರು ಮಳೆ ಜೊತೆಗೆ ವಿಪರೀತ ಗಾಳಿ, ಜನರಲ್ಲಿ ಭೀತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment