ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 27 JULY 2024 : ಮಲೆನಾಡು ಭಾಗದಲ್ಲಿ ಮತ್ತೆ ಮಳೆ ಬಿರುಸಾಗಿದೆ. ಹಾಗಾಗಿ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದೆ. ತುಂಗಾ ಜಲಾಶಯದಿಂದ ಈಗಾಗಲೇ ಹೊಳೆಗೆ ನೀರು ಹರಿಸಲಾಗುತ್ತಿದೆ. ಭದ್ರಾ ಮತ್ತು ಲಿಂಗನಮಕ್ಕಿ ಡ್ಯಾಮ್ಗಳಲ್ಲಿ ಕ್ರಸ್ಟ್ ಗೇಟ್ ಹಂತಕ್ಕೆ ನೀರು ಬಂದಿದೆ.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು 74,514 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ನೀರು ಸಂಗ್ರಹ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1807 ಅಡಿಗೆ ತಲುಪಿದೆ. ಶುಕ್ರವಾರ ಜಲಾಶಯದಲ್ಲಿ ಗಂಗೆ ಪೂಜೆ ನೆರವೇರಿಸಿ ಒಂದು ಕ್ರಸ್ಟ್ ಗೇಟ್ ಮೂಲಕ ಸ್ವಲ್ಪ ಪ್ರಮಾಣದ ನೀರನ್ನು ಹರಿಸಲಾಗಿತ್ತು. ಮಳೆ ಮತ್ತಷ್ಟು ಬಿರುಸು ಪಡೆದರೆ ಲಿಂಗನಮಕ್ಕಿ ಜಲಾಶಯ ಶೀಘ್ರ ಭರ್ತಿಯಾಗಲಿದೆ.
ತುಂಗಾ ಜಲಾಶಯದ ಒಳ ಹರಿವು ಕೂಡ ಏರಿಕೆಯಾಗಿದೆ. ಇವತ್ತು 81,904 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ಶಿವಮೊಗ್ಗದಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ತೀರ್ಥಹಳ್ಳಿಯಲ್ಲಿ ಇವತ್ತೂ ಜೋರು ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಗಾಜನೂರಿನ ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಪ್ರಮಾಣ ಹೆಚ್ಚಳವಾಗುವ ನಿರೀಕ್ಷೆ ಇದೆ.
ಭದ್ರಾ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. ಇವತ್ತು ಭದ್ರಾ ಡ್ಯಾಂಗೆ 49,801 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ಗರಿಷ್ಠ ನೀರು ಸಂಗ್ರಹ ಮಟ್ಟ 186 ಅಡಿ. ಇವತ್ತು ನೀರನ ಮಟ್ಟ 178 ಅಡಿಗೆ ತಲುಪಿದೆ. ಭದ್ರಾ ಡ್ಯಾಮ್ನಲ್ಲಿ ಒಟ್ಟು 71.5 ಟಿಎಂಸಿ ನೀರು ಸಂಗ್ರಹಿಸಬಹುದು. ಈವರೆಗೆ 61.82 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ರಾತ್ರಿ ಇಡೀ ಅಬ್ಬರಿಸಿದ ವರುಣ, ಇವತ್ತು ಶಿವಮೊಗ್ಗ ಜಿಲ್ಲೆಗೆ ಅಲರ್ಟ್ ಪ್ರಕಟ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






