ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA CITY, 30 JULY 2024 : ಜಲಾನಯನ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯದ ಒಳ ಹರಿವು (Inflow) ಹೆಚ್ಚಳವಾಗಿದೆ. ಇದರಿಂದ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಳವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ, ಕೊಪ್ಪ, ಎನ್.ಆರ್.ಪುರ ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿದೆ. ತುಂಗಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 77 ಸಾವಿರ ಕ್ಯೂಸೆಕ್ ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಕಳೆದ ವಾರ 80 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿತ್ತು. ಆಗ ಸೀಗೆಹಟ್ಟಿಯ ವಿವಿಧೆಡೆ ಮನೆಗಳು ಜಲಾವೃತವಾಗಿದ್ದವು.
ಭದ್ರಾ ಜಲಾಶಯದ ನಾಲ್ಕು ಗೇಟ್‌ಗಳ ಮೂಲಕ ಹೊಳೆಗೆ ನೀರು ಹರಿಸಲಾಗುತ್ತಿದೆ. ಒಳ ಹರಿವು ಹೆಚ್ಚಳವಾದಂತೆ ಹೊರ ಹರಿವು ಏರಿಕೆಯಾಗಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಭದ್ರಾ ಜಲಾಶಯಕ್ಕೆ 38 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. 30 ಸಾವಿರ ಕ್ಯೂಸೆಕ್ ಹೊರ ಹರಿವು ಇತ್ತು.
ಇದನ್ನೂ ಓದಿ ⇓
ಭದ್ರಾ ಡ್ಯಾಂನ ನಾಲ್ಕು ಗೇಟ್‌ಗಳು ಓಪನ್