ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
THIRTHAHALLI, 30 JULY 2024 : ತೀರ್ಥಹಳ್ಳಿ ತಾಲೂಕಿನಾದ್ಯಂತ ಇವತ್ತು ಮಳೆ ಅಬ್ಬರಿಸುತ್ತಿದೆ (Heavy Rain). ತುಂಗಾ ನದಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇನ್ನೊಂದೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜಗಳಿಗೆ ರಜೆ ಘೋಷಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಲೂಕಿನಾದ್ಯಂತ ಮಳೆ ಅಬ್ಬರ
ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಬಿರುಸಾಗಿದೆ. ಬೆಳಗ್ಗೆಯಿಂದ ಎಡೆಬಿಡದೆ ಮಳೆಯಾಗುತ್ತಿದೆ. ಸದ್ಯ ಹೊನ್ನೇತಾಳು, ಬಿದರಗೋಡು ಸೇರಿದಂತೆ ಆಗುಂಬೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ತೂದರು, ಭಾಂಡ್ಯ ಕುಕ್ಕೆ, ತ್ರಯಂಬಕಪುರ, ದೇಮ್ಲಾಪುರ, ಆರಗ, ಹೆಗ್ಗೋಡು ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿರುವ ವರದಿಯಾಗಿದೆ.
ರಾಮ ಮಂಟಪದ ಮೇಲೆ ನೀರು
ಶೃಂಗೇರಿ, ತೀರ್ಥಹಳ್ಳಿಯಲ್ಲಿ ಭಾರಿ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರಸಿದ್ಧ ರಾಮ ಮಂಟಪ ಮುಳುಗಿದೆ. ಮಂಟಪದ ಮೇಲೆ ಎರಡ್ಮೂರು ಅಡಿಗಿಂತಲೂ ಹೆಚ್ಚು ನೀರು ಹರಿಯುತ್ತಿದೆ ಎನ್ನಲಾಗುತ್ತಿದೆ.
ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ತುಂಗಾ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ತಾಲೂಕಿನಾದ್ಯಂತ ನದಿ ಪಾತ್ರದ ಜನರಲ್ಲಿ ಭಯ ಆವರಿಸಿದೆ. ತಗ್ಗು ಪ್ರದೇಶದ ನಿವಾಸಿಗಳಲ್ಲಿಯು ಆತಂಕ ಮೂಡಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜು.31ರಂದು ತೀರ್ಥಹಳ್ಳಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ.
ಇದನ್ನೂ ಓದಿ ⇓
ತುಂಗಾ, ಭದ್ರಾ ಜಲಾಶಯಗಳ ಒಳ, ಹೊರ ಹರಿವು ಏರಿಕೆ, ನದಿ ಪಾತ್ರದಲ್ಲಿ ಜನರಲ್ಲಿ ಭೀತಿ