ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
NEW DELHI, 31 JULY 2024 : ಶಿವಮೊಗ್ಗ ಲೋಕಸಭೆ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ (Airport) ಮಂಜೂರು ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಇಂದು ದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮತ್ತೊಂದು ವಿಮಾನ ನಿಲ್ದಾಣ ಎಲ್ಲಿ?
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಗೆ ಮತ್ತೊಂದು ವಿಮಾನ ನಿಲ್ದಾಣಕ್ಕೆ ಮನವಿ ಸಲ್ಲಿಸಲಾಯಿತು. ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇಗುಲಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ ವಿಮಾನ ನಿಲ್ದಾಣ ಮಂಜೂರು ಮಾಡುವಂತೆ ಸಂಸದ ರಾಘವೇಂದ್ರ ಮನವಿ ಸಲ್ಲಿಸಿದರು.
500 ಎಕರೆ ಸ್ಥಳವಿದೆ
ಬೈಂದೂರು ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳವಿದೆ. ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತರಿಗೆ ಅನುಕೂಲ ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಸಲ್ಲಿಸಲಾಯಿತು.
ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಘವೇಂದ್ರ ತಿಳಿಸಿದ್ದಾರೆ. ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಜೊತೆಗಿದ್ದರು.
ಇದನ್ನೂ ಓದಿ ⇓
ಮಂಜುನಾಥಗೌಡ ಸೇರಿ ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ, ಹಾಲು ಒಕ್ಕೂಟದ ಚುನಾವಣೆಗೆ ಯಾರೆಲ್ಲ ಸ್ಪರ್ಧಿಸಿದ್ದಾರೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422