DAM LEVEL, 4 AUGUST 2024 : ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಮತ್ತು ಹೊರ ಹರಿವು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ತುಸು ಇಳಿಕೆಯಾಗಿದೆ. ಇವತ್ತು 36,601 ಕ್ಯೂಸೆಕ್ ಇದೆ. 27,780 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರು ಸಂಗ್ರಹ ಮಟ್ಟ 1819 ಅಡಿ. ಇವತ್ತು 1815.60 ಅಡಿಯಷ್ಟು ನೀರಿನ ಸಂಗ್ರಹವಿದೆ. 140.27 ಟಿಎಂಸಿ ನೀರು ಇದೆ.
ತುಂಗಾ ಜಲಾಶಯದ ಒಳ ಹರಿವು ಕೂಡ ಇಳಿಕೆಯಾಗಿದೆ. ಇವತ್ತು 35,957 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ನೀರಿನ ಮಟ್ಟ ಇಳಿಕೆ ಆಗಿರುವುದರಿಂದ ಕೋರ್ಪಲಯ್ಯ ಛತ್ರ ಮಂಟಪ ಮುಕ್ಕಾಲು ಭಾಗ ಮಾತ್ರ ಮುಳುಗಿದೆ.
ಭದ್ರಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 19,512 ಕ್ಯೂಸೆಕ್ ಒಳ ಹರಿವು ಇದೆ. 29,894 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 186 ಅಡಿ. ಇಂದಿನ ನೀರಿನ ಮಟ್ಟ 180 ಅಡಿ ಇದೆ. ಪ್ರಸ್ತುತ 64.17 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಎಷ್ಟಿರುತ್ತೆ ತಾಪಮಾನ?
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು