ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DAM LEVEL, 5 AUGUST 2024 : ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಕಡಿಮೆಯಾಗಿದೆ. ಇವತ್ತು ಯಾವ್ಯಾವ ಜಲಾಶಯಗಳಿಗೆ ಎಷ್ಟಿದೆ ಒಳ ಹರಿವು.
ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. 31,051 ಕ್ಯೂಸೆಕ್ ಒಳ ಹರಿವು ಇದೆ. 14,796 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1816 ಅಡಿ ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ ಇದೆ. ಪ್ರಸ್ತುತ 141.68 ಟಿಎಂಸಿ ನೀರು ಸಂಗ್ರಹವಾಗಿದೆ.
ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕೂಡ ಕಡಿಮೆಯಾಗಿದೆ. 24,828 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ನೀರಿನ ಹೊರ ಹರಿವು ಕಡಿಮೆಯಾಗಿರುವ ಹಿನ್ನೆಲೆ ತುಂಗಾ ನದಿ ನೀರಿನ ಮಟ್ಟ ಇಳಿಕೆಯಾಗಿದೆ. ಕೋರ್ಪಲಯ್ಯ ಛತ್ರ ಮಂಟಪದ ಅರ್ಧದಷ್ಟು ಮಾತ್ರ ಮುಳುಗಡೆಯಾಗಿದೆ.
ಭದ್ರಾ ಜಲಾಶಯದ ಒಳ ಹರಿವು ಕೂಡ ಕಡಿಮೆಯಾಗಿದೆ. ಇವತ್ತು 16,071 ಕ್ಯೂಸೆಕ್ ಒಳ ಹರಿವು ಇದೆ. 15,551 ಕ್ಯೂಸೆಕ್ ಹೊರ ಹರಿವು ಇದೆ. ಗರಿಷ್ಠ 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ 180 ಅಡಿಯಷ್ಟು ನೀರು ಸಂಗ್ರಹವಿದೆ.
ಇದನ್ನೂ ಓದಿ ⇓
ತಳಿರು ತೋರಣದಿಂದ ಅಲಂಕಾರ, ಪಟಾಕಿ ಸಿಡಿಸಿ ಸಂಭ್ರಮ, ಊರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






