GOOD MORNING SHIMOGA NEWS, 6 AUGUST 2024 :
‘ಪ್ರಕೃತಿ ನಮ್ಮ ಬದುಕಿನ ಭಾಗವಲ್ಲ. ನಾವು ಪ್ರಕೃತಿಯ ಒಂದು ಭಾಗ’
-ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಸಾಹಿತಿ
![]() |
ಶಿವಮೊಗ್ಗ ಸಿಟಿ ನ್ಯೂಸ್
ಶಿವಪ್ಪನಾಯಕ ಪ್ರತಿಮೆ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೋಪ, ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಖಂಡನೆ. ಅಹಿಂದ ಕಾರ್ಯಕರ್ತರಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ.
ಡಾ. ಅಂಬೇಡ್ಕರ್ ಭವನ : ಪೋಕ್ಸೋ ಕಾಯ್ದೆ 2012, ಬಾಲ್ಯ ವಿವಾಹ ನಿಷೇಧ ಕಾಯ್ದೆ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆಗಟ್ಟುವಿಕೆ ಕಾಯ್ದೆ ಅನುಷ್ಠಾನ ಕುರಿತು ಪ್ರೌಢಶಾಲೆ, ಪಿಯು ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರಿಗೆ ಕಾರ್ಯಾಗಾರ. ನ್ಯಾಯಾಧೀಶ ಮಂಜುನಾಥ್ ಅವರಿಂದ ಉದ್ಘಾಟನೆ.
ಮಾಚೇನಹಳ್ಳಿ : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ 11 ನಾಮಪತ್ರ ಸಲ್ಲಿಕೆ. ಒಟ್ಟು ನಾಮಪತ್ರಗಳ ಸಂಖ್ಯೆ 52ಕ್ಕೆ ಏರಿಕೆ.
ಪತ್ರಿಕಾ ಭವನ : ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಆ.7ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟಿಸಲಾಗುತ್ತದೆ ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ತಿಳಿಸಿದರು.
ಪತ್ರಿಕಾ ಭವನ : ನೀರಾವರಿ ನಿಗಮದ ಹಣವನ್ನು ಸಾರ್ವಜನಿಕ ಹಿತಾಸಕ್ತಿ ಹೆಸರಿನಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೆಆರ್‌ಎಸ್ ಪಕ್ಷದ ಮಂಜುನಾಥ ಹಿರೇಚೌಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಪತ್ರಿಕಾ ಭವನ : ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ 50 ವರ್ಷದ ಸಂಭ್ರಮೋತ್ಸವವನ್ನು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಡಾ. ಅಂಬೇಡ್ಕರ್ ಭವನದಲ್ಲಿ ಆ.7ರಂದು ಆಯೋಜಿಸಲಾಗಿದೆ ಎಂದು ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ತಾಲೂಕು ಸುದ್ದಿ
ಭದ್ರಾ ಜಲಾಶಯ : ಕಂದಾಯ ಸಚಿವ ಕೃಷ್ಣಬೈರೇಗೌಡ ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಅತಿವೃಷ್ಟಿ ನಿರ್ವಹಣೆಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.
ಭದ್ರಾವತಿ : ಭದ್ರಾ ಜಲಾಶಯದ ಹೊರ ಹರಿವು ಕಡಿಮೆಯಾದ ಹಿನ್ನೆಲೆ ಭದ್ರಾವತಿಯಲ್ಲಿ ಪ್ರವಾಹ ಪರಿಸ್ಥಿತಿ ಕಡಿಮೆಯಾಗಿದೆ. ಹೊಸ ಸೇತುವೆ ಮೇಲೆ ಹರಿಯುತ್ತಿದ್ದ ನೀರು ಕಡಿಮೆಯಾಗಿದೆ. ಆದರೆ ಸೇತುವೆ ನಿರ್ವಹಣೆ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ನಿರ್ಬಂಧ ಮುಂದುವರೆದಿದೆ.
ಭದ್ರಾವತಿ : ಭದ್ರಾ ನದಿಗೆ ಹಾರಿದ್ದ ಮೆಸ್ಕಾಂ ಸಿಬ್ಬಂದಿ ರಾಜುಗಾಗಿ ಶೋಧ ಕಾರ್ಯ ಮುಂದುವರೆದಿದೆ. ಪತ್ತೆ ಕಾರ್ಯದ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಭಾನುವಾರ ಬೇರೊಬ್ಬ ವ್ಯಕ್ತಿಯ ಶವ ಸಿಕ್ಕಿದೆ.
ಭದ್ರಾವತಿ : ವಿಐಎಸ್‌ಎಲ್, ಎಂಪಿಎಂ ಕಾರ್ಖಾನೆ ವ್ಯಾಪ್ತಿಯ ಕೊಳಗೇರಿ ನಿವಾಸಿಗಳಿಗೆ ಶಾಶ್ವತ ನೆಲೆ ಕಲ್ಪಿಸುವಂತೆ ಜನ್ನಾಪುರದ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಚೇರ್ಮನ್ ಆರ್.ವೇಣುಗೋಪಾಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.
ತೀರ್ಥಹಳ್ಳಿ : ತಾಲೂಕಿನ ಅಗ್ರಹಾರ ಹೋಬಳಿಯ ವಿವಿಧೆಡೆ ರೈತರ ಜಮೀನಿನ ಮೇಲೆ ಧರೆ ಕುಸಿತ, ಹಳ್ಳಗಳ ದಂಡೆ ಒಡೆದು ತೋಟಗಳಿಗೆ ಹಾನಿಯಾದ ಪ್ರದೇಶಕ್ಕೆ ಕಂದಾಯ ಇಲಾಖೆ ಅಧಿಕಾರಿಗಳ ಜೊತೆಗೆ ಶಾಸಕ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ. ಪರಿಹಾರಕ್ಕೆ ಸೂಕ್ತ ವರದಿ ಸಲ್ಲಿಸುವಂತೆ ಸೂಚನೆ.
ತೀರ್ಥಹಳ್ಳಿ : 84 ವರ್ಷದ ಹಿಂದೆ ಸ್ಥಾಪನೆಯಾದ ತೀರ್ಥಹಳ್ಳಿ ಪ್ರಾಥಮಿಕ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ವಾರ್ಷಿಕ 33.72 ಕೋಟಿ ರೂ. ವ್ಯವಹಾರ ನಡೆಸಿದೆ. 1.17 ಕೋಟಿ ರೂ.ಗು ಹೆಚ್ಚಿನ ಲಾಭ ಗಳಿಸಿದೆ ಎಂದು ಭೂ ಬ್ಯಾಂಕ್ ಅಧ್ಯಕ್ಷ ಬಸವಾನಿ ವಿಜಯದೇವ್ ಹೇಳಿದರು.
ಕುಂಸಿ : ಶಿವಮೊಗ್ಗ ತಾಲೂಕು ಮಂಜರಿ ಕೊಪ್ಪದಲ್ಲಿ ಈಚೆಗೆ ನಡೆದಿದ್ದ ಸಾವಿತ್ರಮ್ಮ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದರ್ಶನನ್ನು ಕುಂಸಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆದರ್ಶ ಸಾವಿತ್ರಮ್ಮ ಅವರ ಅಣ್ಣನ ಮಗ ಎಂದು ತಿಳಿದುಬಂದಿದೆ.
ತ್ಯಾವರೆಕೊಪ್ಪ : ಹುಲಿ ಮತ್ತು ಸಿಂಹಧಾಮದ ಹಿರಿಯ ಸಿಂಹ ಆರ್ಯ (18) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಸೋಮವಾರ ಅಸುನೀಗಿದೆ. 2008ರಲ್ಲಿ ಮೈಸೂರು ಮೃಗಾಲಯದಿಂದ ಆರ್ಯನನ್ನು ಶಿವಮೊಗ್ಗಕ್ಕೆ ತರಲಾಗಿತ್ತು. ಈಗ ತ್ಯಾವರೆಕೊಪ್ಪದ ಮೃಗಾಲಯದ ಸಿಂಹಗಳ ಸಂಖ್ಯೆ 4ಕ್ಕೆ ಇಳಿದಿದೆ.
ಶಿಕಾರಿಪುರ, ಹೊಸನಗರ, ಸಾಗರ, ಸೊರಬ ನ್ಯೂಸ್
ಶಿಕಾರಿಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದು ಎಂದು ಅಹಿಂದ ಸಂಘಟನೆ, ಸಿದ್ದರಾಮಯ್ಯ ಅಭಿಮಾನಿಗಳಿಂದ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ.
ಆನಂದಪುರ : ಹೆಬ್ಬೋಡಿ ಗ್ರಾಮದ ಸರ್ಕಾರಿ ಶಾಲೆ ಬಳಿ ಬೃಹತ್ ಆಲದ ಮರ ರಸ್ತೆಗೆ ಬಿದ್ದಿದೆ. ಎರಡು ವಿದ್ಯುತ್ ಕಂಬಗಳು ಹಾನಿಯಾಗಿವೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ.
ತ್ಯಾಗರ್ತಿ : ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಸಂತೆ ಗ್ರಾಮದ ಶಿನೋಜ್ ಅಪ್ಪಚ್ಚನ್ ಎಂಬುವವರ ಮನೆಯಲ್ಲಿ ಹಾಡಹಗಲೆ ಕಳ್ಳತನ. ಹಣ, ಬಂಗಾರದ ಒಡವೆಗಳು ಕಳ್ಳತನವಾಗಿದೆ.
ರಿಪ್ಪನ್‌ಪೇಟೆ : ಹೊಂಬುಜ ಮಠದಲ್ಲಿ ಬಾಷೆ – ಸಾಹಿತ್ಯ ರಸಗ್ರಹಣ ಶಿಬರ ನಡೆಯಿತು. ಜೈನ ಮಠದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರತಿಭಟನೆ : ಹೊಸ ವೃಂದ, ನೇಮಕಾತಿ ನಿಯಮಗಳನ್ನು 2016ಕ್ಕಿಂತಲು ಮುಂಚೆ ನೇಮಕವಾದವರಿಗೆ ಅನ್ವಯಗೊಳಿಸಬಾರದು ಎಂದು ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ. ಸೊರಬ, ಹೊಸನಗರ, ತೀರ್ಥಹಳ್ಳಿ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.
ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಡ್ಲುಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಆಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲು ಪ್ರಕಟ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200