ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 6 AUGUST 2024 : ಶಿವಮೊಗ್ಗ ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್ (Night Landing) ಕೆಲಸದ ಪುನಾರಂಭಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸದರ ಪ್ರಕಟಣೆಯಲ್ಲಿ ಏನಿದೆ?
ಜನವರಿ 2024ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಡಿಜಿಸಿಎ ಅನುಮೋದನೆ ನೀಡಿದೆ. ಲೋಕೋಪಯೋಗಿ ಇಲಾಖೆ ಈ ಕೆಲಸ ನಿರ್ವಹಿಸಲಿದೆ. ಈಗಾಗಲೇ ಡಿಜಿಸಿಎ ಅಧಿಕಾರಿಗಳು ರೇಖಾಚಿತ್ರಗಳು, ಸಂಬಂಧಿತ ದಾಖಲೆ ಪರಿಶೀಲಿಸಿದ್ದಾರೆ. ಪರಿಕಲ್ಪನೆ, ವಿನ್ಯಾಸ ಮತ್ತು ಕಾಮಗಾರಿ ನಡೆಸುವ ಮಟ್ಟವನ್ನು ಪರಿಶೀಲಿಸಿ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

ಶೇ.65ರಷ್ಟು ಕೆಲಸ ಆಗಿದೆ
ಜನವರಿ 2024ರ ಹೊತ್ತಿಗೆ ಶೇ.65ರಷ್ಟು ಕೆಲಸ ಪೂರ್ಣಗೊಂಡಿದೆ. ಉಳಿದ ಕೆಲಸ ಕನಿಷ್ಠ ಎರಡು ತಿಂಗಳು ಹಿಡಿಯಲಿದೆ. ಚಳಿಗಾಲಕ್ಕು ಮೊದಲು, ಶಿವಮೊಗ್ಗ ವಿಮಾನ ನಿಲ್ದಾಣವನ್ನು ಎಲ್ಲಾ ಹವಾಮಾನ ಕಾರ್ಯಾಚರಣೆಗೆ ನವೀಕರಿಸಲಾಗುತ್ತದೆ. ಪ್ರತಿಕೂಲ ಹವಾಮಾನ, ಮಳೆ, ರಾತ್ರಿ ಮುಂತಾದ ಅನಿರೀಕ್ಷಿತ ವಿಮಾನ ಕಾರ್ಯಾಚರಣೆಗೆ ವಿಮಾನ ನಿಲ್ದಾಣವನ್ನು ಸಜ್ಜುಗೊಳಿಸಲಾಗುತ್ತದೆ.
ಎಲ್ಲ ಹವಾಮಾನದ ಕಾರ್ಯಾಚರಣೆ ಸಕ್ರಿಯಗೊಳಿಸುವ ಮುನ್ನ ಡಿಜಿಸಿಎ ಅಧಿಕಾರಿಗಳು ಯೋಜನೆಯನ್ನು ಮರು ಪರಿಶೀಲಿಸುತ್ತಾರೆ ಎಂದು ಸಂಸದ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ ⇓
ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್ ಬೆಂಕಿ, ಕ್ಷಣ ಹೊತ್ತಲ್ಲೇ ಧಗಧಗ ಹೊತ್ತಿ ಉರಿದ ವಾಯುವ್ಯ ಸಾರಿಗೆ
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















