DAM LEVEL, 7 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಇಳಿಕೆಯಾಗಿದೆ. (ಈ ಸುದ್ದಿಯನ್ನು ಇನ್ನು 55 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಲಿಂಗನಮಕ್ಕಿ ಜಲಾಶಯದ ಒಳ ಹರಿವು ತಗ್ಗಿದೆ. ಇವತ್ತು 22,345 ಕ್ಯೂಸೆಕ್ ಒಳ ಹರಿವು ಇದೆ. 12,482 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.30 ಅಡಿ ಇದೆ. ಒಟ್ಟು 151.64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 142.65 ಟಿಎಂಸಿ ನೀರು ಸಂಗ್ರಹವಾಗಿದೆ.
ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 19,951 ಕ್ಯೂಸೆಕ್ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿ ನೀರಿನ ಮಟ್ಟ ಇಳಿಕೆಯಾಗಿದೆ.
ಭದ್ರಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಜಲಾಶಯಕ್ಕೆ 7,801 ಕ್ಯೂಸೆಕ್ ಒಳ ಹರಿವು ಇದೆ. 7223 ಕ್ಯೂಸೆಕ್ ನೀರನ್ನು ಮಾತ್ರ ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.1 ಅಡಿಗೆ ಏರಿಕೆಯಾಗಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 64.27 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?
