ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ನೀರಿನ ಮಟ್ಟ ಎಷ್ಟಿದೆ?

DAM LEVEL, 9 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಆದ್ದರಿಂದ ಮೂರು ಪ್ರಮುಖ ಜಲಾಶಯಗಳ ಒಳ, ಹೊರ ಹರಿವು ಕಡಿಮೆಯಾಗಿದೆ. (ಈ ಸುದ್ದಿಯನ್ನು ಇನ್ನು 57 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

EBEDEF -DAM-LEVEL-LINGANAMAKKI-DAM.webpಶರಾವತಿ ಕಣಿವೆಯಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು 11,007 ಕ್ಯೂಸೆಕ್‌ ಒಳ ಹರಿವು ಇದೆ. 7,189 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 1816.45 ಅಡಿ ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 151.64 ಟಿಎಂಸಿ. ಪ್ರಸ್ತುತ 143.09 ಟಿಎಂಸಿ ನೀರಿನ ಸಂಗ್ರಹವಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

EBEDEF - DAM-LEVEL-TUNGA-DAM.webpಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಕೂಡ ಇಳಿಕೆಯಾಗಿದೆ. 12,615 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ ಭರ್ತಿ ಆಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

EBEDEF - DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಕೂಡ ಕುಸಿತ ಕಂಡಿದೆ. 8825 ಕ್ಯೂಸೆಕ್‌ ಒಳ ಹರಿವು ಇದೆ. 6811 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 180.4 ಅಡಿ ಇದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 64.65 ಟಿಎಂಸಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ ⇓

ಟಿಪ್ಪರ್‌, ಬೈಕ್‌ ಮಧ್ಯೆ ಅಪಘಾತ, ಯುವಕ ಸಾವು, ಮತ್ತೊಬ್ಬ ಸ್ಥಿತಿ ಗಂಭೀರ

Bhadra-Dam-Water-Out-Flow

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment