ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOSANAGARA, 9 AUGUST 2024 : ಇಬ್ಬರು ಮಕ್ಕಳನ್ನು (Children) ಬಾವಿಗೆ ತಳ್ಳಿ ತಾನು ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮತ್ತಿಕೈ ಗ್ರಾಮ ವ್ಯಾಪ್ತಿಯ ಚಂಪಕಾಪುರದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.
ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12), ಸಂಪದ (6) ಮೃತರು. ಗುರುವಾರ ರಾತ್ರಿ ವಾಣಿ ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾನು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಾವಿಯಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಠಾಣೆ ಪಿಎಸ್ಐ ರಮೇಶ್ ಘಟನೆ ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ ⇓
ಟಿಪ್ಪರ್, ಬೈಕ್ ಮಧ್ಯೆ ಅಪಘಾತ, ಯುವಕ ಸಾವು, ಮತ್ತೊಬ್ಬ ಸ್ಥಿತಿ ಗಂಭೀರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422 ADVERTISEMENT