ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 10 AUGUST 2024 : ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್‌ನಿಂದ (Credit Card) 2.10 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ ⇒ ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು
ಕ್ರೆಡಿಟ್ ಕಾರ್ಡ್‌ನಿಂದ ಹಣ ಕಟ್ ಆಗಲಿದೆ
ಶಿವಮೊಗ್ಗದ ಮಹಿಳೆಯೊಬ್ಬರಿಗೆ (ಹೆಸರು ಗೌಪ್ಯ) ಕರೆ ಮಾಡಿದ್ದ ವ್ಯಕ್ತಿಯೊಬ್ಬ ಬ್ಯಾಂಕ್‌ನಿಂದ ಕರೆ ಮಾಡುತ್ತಿರುವವನಂತೆ ನಂಬಿಸಿ, ‘ನಿಮ್ಮ ಕ್ರೆಡಿಟ್ ಕಾರ್ಡ್‌ನಿಂದ ಅಂತಾರಾಷ್ಟ್ರೀಯ ಟೂರ್‌ಗೆ ಹಣ ಕಡಿತವಾಗಲಿದೆ. ಇದನ್ನು ತಪ್ಪಿಸಲು ಮೊಬೈಲ್‌ಗೆ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಕೊಳ್ಳಬೇಕುʼ ಎಂದು ಸೂಚಿಸಿದ್ದ. ಅದರಂತೆ ಆತ ಸೂಚಿಸಿದ್ದ ಎಪಿಕೆ ಫೈಲ್ ಅನ್ನು ಮಹಿಳೆ ಡೌನ್ ಮಾಡಿದ್ದರು.
ಎರಡು ಲಕ್ಷ ರೂ. ಹಣ ವರ್ಗ
ಎಪಿಕೆ ಫೈಲ್ ಡೌನ್‌ಲೋಡ್ ಆದ ಬಳಿಕ ಮಹಿಳೆಯ ಕ್ರೆಡಿಟ್ ಕಾರ್ಡ್‌ನಿಂದ ಹಂತ ಹಂತವಾಗಿ 2.10 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಹಿಳೆಯ ಪತಿ ದೂರು ನೀಡದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಶಿಕಾರಿಪುರದಲ್ಲಿ ಬೆಕ್ಕು ಕಚ್ಚಿ ಮಹಿಳೆ ಸಾವು