ಭದ್ರಾವತಿಯಲ್ಲಿ ಕರಡಿ ದಾಳಿ, ಕಾರ್ಮಿಕನಿಗೆ ಗಾಯ

BHADRAVATHI, 11 AUGUST 2024 : ಕರಡಿ (BEAR) ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಎಮ್ಮೆಹಟ್ಟಿ ಗ್ರಾಮದಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕೃಷಿ ಕಾರ್ಮಿಕ ಆನಂದಪ್ಪ (65) ಕರಡಿ ದಾಳಿ ಗಾಯಗೊಂಡಿದ್ದಾರೆ. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದಾಗ ಕರಡಿ ದಾಳಿ ನಡೆಸಿದ್ದು, ಕೈ, ಕಾಲು ಮತ್ತು ಬೆನ್ನಿಗೆ ಗಾಯವಾಗಿದೆ. ಗಾಯಗೊಂಡಿದ್ದ ಆನಂದಪ್ಪ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

bear-attack-on-a-person-at-emmehatti-in-bhadravathi

ಇದನ್ನೂ ಓದಿ ⇒ ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್‌ ಗ್ರೂಪ್‌ ಶುರು, ಹರಿದು ಬಂತು ನೆರವು

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

bear-attack-on-a-person-at-emmehatti-in-bhadravathi

Leave a Comment