ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಪತ್ತೆ, ರೆಕಾರ್ಡ್‌ ಆಗ್ತಿತ್ತು ವಿಡಿಯೋ, ಭದ್ರಾವತಿ ಯುವಕ ಅರೆಸ್ಟ್‌

BENGALURU, 12 AUGUST 2024 : ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇಟ್ಟು ರಹಸ್ಯವಾಗಿ (Hidden) ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪದಲ್ಲಿ ಭದ್ರಾವತಿ ಮೂಲದ ಯುವಕನನ್ನು ಬಂಧಿಸಲಾಗಿದೆ. ಬೆಂಗಳೂರಿನ ಥರ್ಡ್‌ ವೇವ್‌ ಕಾಫಿಯ ಬಿಇಎಲ್‌ ರಸ್ತೆಯ ಔಟ್‌ಲೆಟ್‌ನಲ್ಲಿ ಘಟನೆ ನಡೆದಿದೆ. (ಈ ಸುದ್ದಿಯನ್ನು ಇನ್ನು 45 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಕಾಫಿ ಶಾಪ್‌ನ ಸಿಬ್ಬಂದಿ ಭದ್ರಾವತಿಯ ಮನೋಜ್‌ (23) ಎಂಬಾತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.

ಕಸದ ಬುಟ್ಟಿಯಲ್ಲಿ ಮೊಬೈಲ್‌

ಕಾಫಿ ಶಾಪ್‌ನ ಮಹಿಳಾ ಶೌಚಾಲಯದ ಕಸದ ಬುಟ್ಟಿಯಲ್ಲಿ ಮೊಬೈಲ್‌ ಇರಿಸಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿತ್ತು. ಮೊಬೈಲ್‌ ಫ್ಲೈಟ್‌ ಮೋಡ್‌ನಲ್ಲಿ ಇರಿಸಲಾಗಿತ್ತು. ಮಹಿಳೆಯೊಬ್ಬರು ಇದನ್ನು ಗಮನಿಸಿ ಕಾಫಿ ಶಾಪ್‌ನವರಿಗೆ ತಿಳಿಸಿದ್ದರು. ಸಿಸಿಟಿವಿ ಪರಿಶೀಲಿಸಿದಾಗ ಮನೋಜ್‌ ಕೃತ್ಯ ಎಸಗಿರುವುದು ಗೊತ್ತಾಗಿತ್ತು. ಕೂಡಲೆ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

third-wave-coffee-shop-incident.

ಮಹಿಳಾ ಶೌಚಾಲಯದಲ್ಲಿ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ವಿಚಾರ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಈ ಮಧ್ಯೆ, ಥರ್ಡ್‌ ವೇವ್‌ ಕಾಫಿ ಸಂಸ್ಥೆಯು ಮನೋಜ್‌ನನ್ನು ಕೆಲಸದಿಂದ ವಜಾಗೊಳಿಸಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ ⇒ ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್‌ ಗ್ರೂಪ್‌ ಶುರು, ಹರಿದು ಬಂತು ನೆರವು

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

third-wave-coffee-shop-incident.

Leave a Comment