ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 15 AUGUST 2024 : ನಗರದಲ್ಲಿ ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ (Stone Pelting). ಬಾಗಿಲು ತೆಗೆದು ನೋಡಲು ಹೋದಾಗ ವೃದ್ಧನ ಮೇಲೆ ಇಟ್ಟಿಗೆ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಶಿವಮೊಗ್ಗದ ಕಾಮಾಕ್ಷಿ ಬೀದಿಯ ರಾಮಣ್ಣ ಎಂಬುವವರ ಮನೆ ಮೇಲೆ ಕಲ್ಲು ತೂರಲಾಗಿದೆ. ಆ.11ರ ರಾತ್ರಿ ರಾಮಣ್ಣ ಅವರು ಊಟ ಮುಗಿಸಿ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹೊರಗೆ ಶಬ್ದವಾಗಿದೆ. ರಾಮಣ್ಣ ಮತ್ತು ಅವರ ಪತ್ನಿ ಬಾಗಿಲು ತೆಗೆದಾಗ ಕಿಡಿಗೇಡಿಗಳು ತೂರಿದ ಇಟ್ಟಿಗೆ ರಾಮಣ್ಣ ಅವರ ಭುಜದ ಮೇಲೆ ಬಿದ್ದಿದೆ. ಕೂಡಲೆ ಮೊಮ್ಮಗನಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
ಪೊಲೀಸ್ ಠಾಣೆಗೆ ದೂರು ನೀಡಲು ಮೊಮ್ಮಗನೊಂದಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಪುನಃ ಕಲ್ಲು ತೂರಿದ್ದಾರೆ. ಅದೃಷ್ಟವಶಾತ್ ಪಾರಾಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ರಾಮಣ್ಣ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಶಿವಮೊಗ್ಗದ ಸರ್ಕಾರಿ ಕಚೇರಿಗಳು ಜಗಮಗ, ಸಿಟಿ ಸೆಂಟರ್ನಲ್ಲಿ ತ್ರಿವರ್ಣ ಅಲಂಕಾರ, ಎಲ್ಲೆಲ್ಲು ಸ್ವಾತಂತ್ರ್ಯ ಸಂಭ್ರಮ
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





