ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ದಾಳಿ, ಬೇಟೆಯಾಡಿದ್ದ ಮಾಲು ಸಹಿತ ಆರೋಪಿ ಅರೆಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

HOSANGARA, 17 AUGUST 2024 : ಖಚಿತ ಮಾಹಿತಿ ಮೇರೆಗೆ ದಾಳಿ (Raid) ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾರು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಹೊಸನಗರ ತಾಲೂಕು ನಗರ ವಲಯ ಅರಣ್ಯ ವ್ಯಾಪ್ತಿಯ ಹುಂಚ ಹೋಬಳಿ ಬಾಳೆಕೊಪ್ಪ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಮಾಲು ಸಹಿತ ಆರೋಪಿ ಸತೀಶ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆಂಚಪ್ಪನವರ್ ಮಾರ್ಗದರ್ಶನದಲ್ಲಿ, ಹೊಸನಗರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ನಿರ್ದೇಶನದಂತೆ, ನಗರ ವಲಯ ಅರಣ್ಯಾಧಿಕಾರಿ ಮಲ್ಲನಗೌಡ, ಉಪವಲಯ ಅರಣ್ಯಾಧಿಕಾರಿಗಳಾದ ಟಿ.ಪಿ.ನರೇಂದ್ರ ಕುಮಾರ್, ಸತೀಶ್, ಸತೀಶ್ ನಾಯಕ್, ಅಮೃತ ಸುಂಕದ್, ಗಸ್ತು ಅರಣ್ಯ ರಕ್ಷಕರಾದ ಯೋಗರಾಜ್, ಆಂಜನೇಯ, ಮನೋಜ್ ಹಾಗು ವಾಹನ ಚಾಲಕ ರಾಮು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

nagara-divison-forest-officials-arrest-one-for-hunting

ಇದನ್ನೂ ಓದಿ ⇒ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾಗುತ್ತೆ ಫಲಕ, ಇದನ್ನು ಹಾಕೋದ್ಯಾರು ಗೊತ್ತಾ?

Leave a Comment