ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ, 50ಕ್ಕೂ ಹೆಚ್ಚು ಕೋಳಿ ಸಾವು | ಇಲ್ಲಿದೆ 3 ಫಟಾಫಟ್‌ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT NEWS, 19 AUGUST 2024

ಮರ ಬಿದ್ದು ತುಂಡಾದ ವಿದ್ಯುತ್‌ ತಂತಿ

EBEDEF FATAFAT-1-NEW.webpಶಿವಮೊಗ್ಗ ಲೈವ್‌.ಕಾಂ : ಆನಂದಪುರ ಸಮೀಪದ ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಎದುರು ಇರುವ 11 ಕೆ.ವಿ ವಿದ್ಯುತ್ ಲೈನ್ ಮೇಲೆ ಭಾನುವಾರ ದೊಡ್ಡ ಅಕೇಶಿಯಾ ಮರ ಬಿದ್ದು ತಂತಿ ತುಂಡಾಗಿದೆ. ಕಂಬ ಬಿರುಕು ಬಿಟ್ಟಿದೆ. ಆನಂದಪುರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು. ಮೆಸ್ಕಾಂ ಕಚೇರಿ ಇಂಜಿನಿಯ‌ರ್ ಮತ್ತು ಸಿಬ್ಬಂದಿ ತ್ವರಿತವಾಗಿ ದುರಸ್ತಿ ಮಾಡಿದರು.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಶೋಕ ಚಕ್ರವಿಲ್ಲದ ಧ್ವಜ ಹಾರಿಸಿದ ವ್ಯಕ್ತಿ, ವಿಡಿಯೋ ವೈರಲ್‌, ದಾಖಲಾಯ್ತು ಕೇಸ್‌

ಕಲ್ಲಿದ್ದಲು ತುಂಬಿದ್ದ ಲಾರಿ ಅಪಘಾತ

EBEDEF FATAFAT-2-NEW.webpಶಿವಮೊಗ್ಗ ಲೈವ್‌.ಕಾಂ : ರಿಪ್ಪನ್‌ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಕೆರೆಹಳ್ಳಿ ಹಳ್ಳದ ಸಮೀಪ ಲಾರಿ ಅಪಘಾತವಾಗಿದೆ. ಮಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯು ಎದುರು ಬರುತ್ತಿದ್ದ ವಾಹನಕ್ಕೆ ದಾರಿಬಿಡುವ ವೇಳೆ ರಸ್ತೆ ಪಕ್ಕದ ಜಮೀನಿನಲ್ಲಿ ಇಳಿದು ಮರಕ್ಕೆ ಒರಗಿ ನಿಂತಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಇದನ್ನೂ ಓದಿ ⇒ ದಿನ ಭವಿಷ್ಯ | 19 ಆಗಸ್ಟ್‌ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ? 

ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ

Chicken-vehicle-incident-at-kudumallige-in-Thirthahalli

EBEDEF FATAFAT-3-NEW.webpಶಿವಮೊಗ್ಗ ಲೈವ್.ಕಾಂ : ಕುಡುಮಲ್ಲಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕೋಳಿಗಳನ್ನು ಸಾಗಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ. 50ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಶಿವಮೊಗ್ಗದ ಕಡೆಯಿಂದ ಉಡುಪಿ ಜಿಲ್ಲೆಗೆ ಹೊರಟಿದ್ದ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ವಾಹನ ಜಖಂಗೊಂಡಿದ್ದು, ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ⇒ ಜೋಗದಲ್ಲಿ ಬಸ್ಸಿಗೆ ಸಿಲುಕಿದ ಯುವಕ, ಗಂಭೀರ ಗಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 19, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment